ಮಂಡ್ಯ

ಮದ್ದೂರು ಘಟನೆಗೆ ಪೊಲೀಸ್‌ ಇಲಾಖೆ, ಗುಪ್ತಚರ ಇಲಾಖೆ ವೈಫಲ್ಯವೇ ಕಾರಣ: ವಿಜಯೇಂದ್ರ ಕಿಡಿ

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ನಡೆಯಲು ಗೃಹ ಇಲಾಖೆಯ ವೈಫಲ್ಯ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನಲ್ಲಿ ಮೊನ್ನೆ ದೊಡ್ಡ ಮೆರವಣಿಗೆ ನಡೆದರೂ ಎಸ್‌ಪಿ ಇರಲಿಲ್ಲ. ಮಹಿಳೆಯರ ರಕ್ಷಣೆಗಾಗಿ ಓರ್ವ ಕಾನ್ಸ್‌ಟೇಬಲ್‌ ಕೂಡ ಇರಲಿಲ್ಲ. ಕಲ್ಲು ಹಿಡಿದು ಮಸೀದಿ ಒಳಗೆ ಕೂರುತ್ತಾರೆ. ಮೆರವಣಿಗೆ ಬರುತ್ತಿದ್ದಂತೆ ಕಲ್ಲು ತೂರಾಟ ನಡೆಸುತ್ತಾರೆ ಎಂದರೆ ಇದೆಲ್ಲಾ ಪೊಲೀಸ್‌ ಇಲಾಖೆ ಹಾಗೂ ಗುಪ್ತಚರ ಇಲಾಖೆಯ ವೈಫಲ್ಯವಲ್ಲದೇ ಬೇರೆ ಏನೂ ಇಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳು ನೆಮ್ಮದಿಯಾಗಿ ಹಬ್ಬ ಆಚರಣೆ ಮಾಡುವ ಸ್ಥಿತಿಯಿಲ್ಲ. ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡುವ ವಾತಾವರಣ ನಮ್ಮ ರಾಜ್ಯದಲ್ಲಿ ಇಲ್ಲ. ನಮ್ಮ ಹಬ್ಬವನ್ನು ಆಚರಿಸಲು ಆತಂಕದ ವಾತಾವರಣವಿದೆ ಎಂದರೆ ಈ ಸರ್ಕಾರ ಎಷ್ಟರ ಮಟ್ಟಿಗೆ ಓಲೈಕೆ ರಾಜಕಾರಣದಲ್ಲಿ ಮುಳುಗಿದೆ ಎಂಬುದನ್ನು ಜನರೇ ತೀರ್ಮಾನಿಸಬೇಕು ಎಂದು ಕಿಡಿಕಾರಿದರು.

ಇನ್ನು ಸಿಎಂ ಸಿದ್ದರಾಮಯ್ಯನವರು ಶಾಂತಿ ಕದಡುವುದೇ ಬಿಜೆಪಿ ಉದ್ದೇಶ ಎಂದು ಹೇಳಿಕೆ ನೀಡಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು ಇಂತಹ ಹೇಳಿಕೆ ನೀಡಿದರೆ ರಾಜ್ಯವನ್ನು ಭಗವಂತನೇ ಕಾಪಾಡಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago