Mysore
22
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಸಹಜ ಸ್ಥಿತಿಯತ್ತ ಮರಳಿದ ಮದ್ದೂರು: ವ್ಯಾಪಾರ, ವಹಿವಾಟು ಆರಂಭ

ಮಂಡ್ಯ: ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನಲ್ಲೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ.

ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಆದರೆ ಮದ್ದೂರಿನಲ್ಲಿ ಪೊಲೀಸ್‌ ಭದ್ರತೆ ಮುಂದುವರಿದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಭಾನುವಾರ ರಾತ್ರಿ ಮದ್ದೂರಿನ ರಾಮ್‌ ರಹೀಮ್‌ ನಗರ ಮಸೀದಿ ಮುಂಭಾಗದ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸೋಮವಾರ ಹಿಂದೂಪರ ಸಂಘಟನೆಗಳು ಬೃಹತ್‌ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದವು. ನಿನ್ನೆ ಬಿಜೆಪಿ ನಾಯಕರು ಸೇರಿದಂತೆ ಮದ್ದೂರಿನ ಜನತೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಾರ ವಹಿವಾಟು ಬಂದ್‌ ಆಗಿತ್ತು. ಈಗ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ವ್ಯಾಪಾರ ವಹಿವಾಟು ಆರಂಭವಾಗಿದೆ.

Tags:
error: Content is protected !!