ಮಂಡ್ಯ: ಜಿಲ್ಲೆ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಬೆನಲ್ಲೇ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದೆ.
ಮದ್ದೂರಿನಲ್ಲಿ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ತೆರೆಯುತ್ತಿದ್ದು, ಮೂರು ದಿನದ ಬಳಿಕ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಆದರೆ ಮದ್ದೂರಿನಲ್ಲಿ ಪೊಲೀಸ್ ಭದ್ರತೆ ಮುಂದುವರಿದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಭಾನುವಾರ ರಾತ್ರಿ ಮದ್ದೂರಿನ ರಾಮ್ ರಹೀಮ್ ನಗರ ಮಸೀದಿ ಮುಂಭಾಗದ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸೋಮವಾರ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದವು. ನಿನ್ನೆ ಬಿಜೆಪಿ ನಾಯಕರು ಸೇರಿದಂತೆ ಮದ್ದೂರಿನ ಜನತೆ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಾರ ವಹಿವಾಟು ಬಂದ್ ಆಗಿತ್ತು. ಈಗ ಜನಜೀವನ ಸಹಜ ಸ್ಥಿತಿಗೆ ಮರಳಿದ್ದು, ವ್ಯಾಪಾರ ವಹಿವಾಟು ಆರಂಭವಾಗಿದೆ.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…