ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆಯ ವೇಳೆ ನಡೆದ ಗಲಭೆ ಬಳಿಕ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಿಎಂ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಶಿವಪುರ ನಿವಾಸಿ ಜ್ಯೋತಿ ಅವರ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಠಾಣಾ ಇನ್‌ಸ್ಪೆಕ್ಟರ್ ಶಿವಕುಮಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಅನ್ಯಧರ್ಮದ ವಿಚಾರವಾಗಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಪರಸ್ಪರ ಕೋಮುಗಳ ನಡುವೆ ವೈಮನಸ್ಸು, ವೈರತ್ವಕ್ಕೆ ಉತ್ತೇಜನ ನೀಡುವ ಆರೋಪದಲ್ಲಿ ಎಫ್‌ಐಆರ್ ಮಾಡಲಾಗಿದೆ.
ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟದ ಘಟನೆ ಉದ್ವಿಗ್ನತೆಗೆ ಕಾರಣವಾಗಿತ್ತು. ಮಾರನೇ ದಿನ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದರು. ಆಗ ಮಹಿಳೆ ಜ್ಯೋತಿ ಕೂಡ ಲಾಠಿ ಏಟು ತಿಂದಿದ್ದರು. ಈ ದೃಶ್ಯದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು.
ಮೈಸೂರಲ್ಲೂ ಜ್ಯೋತಿ ವಿರುದ್ಧ ದೂರು ದಾಖಲು
ಮೈಸೂರು: ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬವರ ವಿರುದ್ಧ ಮೈಸೂರಿನಲ್ಲಿ ದೂರು ನೀಡಲಾಗಿದೆ.
ಮೈಸೂರು ನಗರ ೧೨ನೇ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಜುನೇದ್ ಎಂಬವರು ಗುರುವಾರ ಬೆಳಿಗ್ಗೆ ಎರಡು ಪ್ರತ್ಯೇಕ ದೂರುಗಳನ್ನು ನೀಡಿದ್ದು, ಮೊದಲ ದೂರಿನಲ್ಲಿ ಮದ್ದೂರಿನಲ್ಲಿ ಸೆ.೮ ರಂದು ಗಣಪತಿ ವಿಸರ್ಜನಾ ಸ್ಥಳದಲ್ಲಿ ಕಲ್ಲು ತೂರಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ನಂತರ ನಡೆದ ಬಿಜೆಪಿ ಮತ್ತು ಸಂಘ ಪರಿವಾರದ ಪ್ರತಿಭಟನಾ ಮೆರವಣಿಗೆಯಲ್ಲಿ ಜ್ಯೋತಿ ಎಂಬಾಕೆಯು ಮುಸ್ಲಿಮರ ವಿರುದ್ಧ ಅತ್ಯಂತ ತುಚ್ಛಪದಗಳಿಂದ ನಿಂದನೆ ಮಾಡಿ ಸಮುದಾಯಕ್ಕೆ ಅಪಮಾನ ಮಾಡಿದ್ದು, ಭಯದ ವಾತಾವರಣ ಉಂಟು ಮಾಡಿದ್ದಾರೆ. ಇವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಅವರು ದೂರಿನಲ್ಲಿ ಕೋರಿದ್ದಾರೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಮುಸ್ಲಿಮರ ವಿರುದ್ಧ ಸಾರ್ವಜನಿವಾಗಿ ಅವಾಚ್ಯ ಶಬ್ದಗಳ ಬಳಕೆಯಿಂದ ಮುಸ್ಲಿಂ ಸಮುದಾಯದವರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗೂ ಧಕ್ಕೆ ಉಂಟಾಗಿದೆ. ಜನರಲ್ಲಿ ಭಯ ಹಾಗೂ ಗೊಂದಲ ಸೃಷ್ಟಿಯಾಗಿದೆ. ಇಂತಹ ಕೃತ್ಯವು ಸಾರ್ವಜನಿಕ ಶಾಂತಿಗೆ ಭಂಗ ತಂದಿದ್ದು, ಮೇಲ್ಕಂಡ ಕಲ್ಲು ತೂರಾಟ ನಡೆಸಿದವರ ಮತ್ತು ಮುಸ್ಲಿಮರಿಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಜುನೇದ್ ಒತ್ತಾಯಿಸಿದ್ದಾರೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…