ಮಂಡ್ಯ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣ ಬೆನ್ನಲ್ಲೇ ಮದ್ದೂರಿನಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಯಿತು.
ಮದ್ದೂರಿನ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಶಾಂತಿ ಸಭೆ ನಡೆದಿದ್ದು, ಸಭೆಗೆ ಹಿಂದೂ ಮುಖಂಡರು ಗೈರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು. ಸಭೆಗೆ ಹಿಂದೂ ಹಾಗೂ ಮುಸ್ಲಿಂ ಮುಖಂಡರನ್ನು ಆಹ್ವಾನಿಸಲಾಗಿತ್ತು.





