swami madduru
ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ.
ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಈಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಇದೇ ವೇಳೆ ನಿನ್ನೆ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರ ಮೇಲೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ದಾಖಲಿಸುತ್ತಾರೆ ಎಂಬುದು ನಮಗೆ ಮೊದಲೆ ಗೊತ್ತಿತ್ತು. ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ. ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ. ಮುಂದೇ ಮತ್ತಷ್ಟು ಎಫ್ಐಆರ್ ಹಾಕುತ್ತಾರೆ ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, 500 ಜನರ ಮೇಲೆ ದೂರು ಮಾಡಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜೊತೆ ಇರುತ್ತೆ ಎಂದು ಭರವಸೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲಾಗುವುದು. ಇದರಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.
ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…