ಮಂಡ್ಯ

ಮದ್ದೂರು| ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಎಸ್.ಪಿ.ಸ್ವಾಮಿ

ಮದ್ದೂರು: ಯಾವುದೇ ಕಾರಣಕ್ಕೂ ನಾವು ಶಾಂತಿ ಸಭೆಗೆ ಹೋಗುವುದಿಲ್ಲ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಪಿ.ಸ್ವಾಮಿ ಹೇಳಿದ್ದಾರೆ.

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಂತಿ ಸಭೆಗೆ ನಾವು ಹೋಗುವುದಿಲ್ಲ. ಉಸ್ತುವಾರಿ ಸಚಿವರು ಒಂದೆರೆಡು ಕಲ್ಲೆಸೆದಿದ್ದಾರೆ ಅಂತಾರೆ. ಗೃಹ ಸಚಿವರು ಸಣ್ಣ ಘಟನೆ ಅಂತಾರೆ. ಘಟನೆ ನಡೆಯದಂತೆ ತಡೆಗಟ್ಟಬೇಕಿತ್ತು. ಈಗ ಸಭೆ ಮಾಡಿದ್ರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ಇದೇ ವೇಳೆ ನಿನ್ನೆ ಪ್ರತಿಭಟನೆ ನಡೆಸಿದ್ದ ಪ್ರತಿಭಟನಾಕಾರ ಮೇಲೆ ಎಫ್ಐಆರ್ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ದಾಖಲಿಸುತ್ತಾರೆ ಎಂಬುದು ನಮಗೆ ಮೊದಲೆ ಗೊತ್ತಿತ್ತು. ನ್ಯಾಯ ಕೇಳಲು ಹೋದವರ ಮೇಲೆ ಅನ್ಯಾಯ ಮಾಡಿದ್ದಾರೆ. ನಮ್ಮವರ ಮೇಲೆಯೇ ದೂರು ದಾಖಲಿಸಿದ್ದಾರೆ. ಮುಂದೇ ಮತ್ತಷ್ಟು ಎಫ್ಐಆರ್ ಹಾಕುತ್ತಾರೆ ಎಂದು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, 500 ಜನರ ಮೇಲೆ ದೂರು ಮಾಡಲಾಗಿದೆ. ಬಿಜೆಪಿ ಲೀಗಲ್ ಟೀಂ ಅವರ ಜೊತೆ ಇರುತ್ತೆ ಎಂದು ಭರವಸೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಾಳೆ 28 ಗಣಪತಿಗಳ ಸಾಮೂಹಿಕ ವಿಸರ್ಜನೆ ಮಾಡಲಾಗುವುದು. ಇದರಲ್ಲಿ 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ.

ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 20 ಸಾವಿರ ಜನರು ಸೇರುವ ನಿರೀಕ್ಷೆ ಇದೆ‌. ಅದಕ್ಕಾಗಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗ್ತಿದೆ. ಮಾರ್ಗದ ಬಗ್ಗೆ ಈಗಾಗಲೇ ಪೊಲೀಸರೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

3 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

3 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

3 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 hours ago