ಮಂಡ್ಯ

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಅಡಗನಹಳ್ಳಿ ಗ್ರಾಮದ ಮಹದೇವಮ್ಮ, ಗುಡ್ಡೆದಪ್ಪ, ಗುಜ್ಜಮ್ಮ ಮೂರು ದೇವಾಲಯಗಳ ಬಾಗಿಲನ್ನು ಕಬ್ಬಿಣದ ಆಯುಧಗಳಿಂದ ಹೊಡೆದು ಒಳಪ್ರವೇಶಿಸಿರುವ ದುಷ್ಕರ್ಮಿಗಳು ದೇವರ ವಿಗ್ರಹಗಳ ಕೊರಳಿನಲ್ಲಿದ್ದ ತಾಳಿ, ಬೆಳ್ಳಿ ಪದಾರ್ಥಗಳು ಸೇರಿದಂತೆ ಹುಂಡಿಯಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಗ್ರಾಮದಲ್ಲಿ ಗುರುವಾರ ಮಂಚಮ್ಮ ದೇವಾಲಯದ ಪ್ರತಿಷ್ಠಾಪನಾ ಪೂಜಾ ಕಾರ್ಯಕ್ರಮವಿದ್ದು, ಅಪಾರ ಭಕ್ತರು ದೇವಾಲಯಗಳಿಗೆ ತೆರಳಿ ನಗದು, ಚಿನ್ನ, ಬೆಳ್ಳಿ ಪದಾರ್ಥಗಳನ್ನು ಹರಕೆ ರೂಪದಲ್ಲಿ ಸಲ್ಲಿಸಿದ್ದನ್ನು ಅರಿತಿದ್ದ ದುಷ್ಕರ್ಮಿಗಳು ಗುರುವಾರ ತಡರಾತ್ರಿ ಕೃತ್ಯ ಎಸಗಿದ್ದಾರೆ.

ಸುಮಾರು ೫ ಗ್ರಾಂ ಚಿನ್ನದ ತಾಳಿ ಸೇರಿದಂತೆ ಬೆಳ್ಳಿತಟ್ಟೆ, ದೇವರ ಸಾಮಾನುಗಳು ಇನ್ನಿತರೆ ಪದಾರ್ಥಗಳನ್ನು ಕಳವು ಮಾಡಿದ್ದು, ಹುಂಡಿಯಲ್ಲಿದ್ದ ಸುಮಾರು ೬
ಲಕ್ಷಕ್ಕೂ ಅಧಿಕ ನಗದನ್ನು ದೋಚಿದ್ದಾರೆ. ಹುಂಡಿಯನ್ನು ದೇವಾಲಯದಿಂದ ಸುಮಾರು ದೂರದವರೆಗೆ ಹೊತ್ತೊಯ್ದು ಜಮೀನೊಂದರಲ್ಲಿ ಬಿಸಾಡಿ ತೆರಳಿದ್ದಾರೆ.

ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ನಾರಾಯಣಿ, ಕೆಸ್ತೂರು ಪಿ.ಎಸ್.ಐ. ಸೇರಿದಂತೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ
ಕೆಸ್ತೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

2 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

2 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

2 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

2 hours ago

ಮಂಡ್ಯ | ಬುದನೂರು ಉತ್ಸವದಲ್ಲಿ 3 ದಿನ ಹೆಲಿ ಟೂರಿಸಂ

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…

3 hours ago