Mysore
23
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

ನಿಮಿಷಾಂಭ ದೇವಸ್ಥಾನದಲ್ಲಿ ಮಾಘ ಹುಣ್ಣಿಮೆ ಸಂಭ್ರಮ

ಮಂಡ್ಯ: ಮಾಘ ಹುಣ್ಣಿಮೆ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ.

ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿಯ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ.

ಹೀಗಾಗಿ ಮಧ್ಯರಾತ್ರಿಯಿಂದಲೇ ಕಾವೇರಿ ನದಿಯಲ್ಲಿ ಸಹಸ್ರಾರು ಜನರು ಮಿಂದೇಳುತ್ತಿದ್ದಾರೆ.

ದೇವಾಲಯಕ್ಕೆ ಮಂಡ್ಯ ಮಾತ್ರವಲ್ಲದೇ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಜನರು ಆಗಮಿಸುತ್ತಿದ್ದು, ನಿಮಿಷಾಂಭೆಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಮಧ್ಯರಾತ್ರಿ 12 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಆರಂಭವಾಗಿದ್ದು, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಅಭಿಷೇಕ ನೆರವೇರಿದೆ.

ಮುಂಜಾನೆ 3 ಗಂಟೆಯಿಂದಲೇ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಇದೇ ಮೊದಲ ಬಾರಿಗೆ ನಿಮಿಷಾಂಭ ರಥೋತ್ಸವ ಜರುಗಿದೆ.

ಕಾವೇರಿ ಸ್ನಾಕ್ಕೆ ಆಗಮಿಸಲಿರುವ ಸಾರ್ವಜನಿಕರಿಗೆ ದಿನವಿಡೀ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

Tags:
error: Content is protected !!