ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸಹೋದ್ಯೊಗಿಗಳ ಮೇಲೆ ಸುಳ್ಳು ದೂರು ದಾಖಲಿಸಿ, ಮಾನಸಿಕ ಕಿರುಕುಳ ನೀಡಿದ್ದಕ್ಕೆ ನ್ಯಾಯಾಲಯ ದಂಡ ವಿಧಿಸಿದ್ದು, ಕೂಡಲೇ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜನಪದ ಮತ್ತು ಬೀದಿ ನಾಟಕ ಕಲಾತಂಡಗಳ ಒಕ್ಕೂಟದ ಅಧ್ಯಕ್ಷ ಬಸವರಾಜು.ಎಸ್ ಒತ್ತಾಯಿಸಿದರು.
ಇಂದು (ಫೆ.25) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹೇಶ್ ಜೋಶಿ ಉದ್ದಟತನ, ಸವಾರ್ಧಿಕಾರಿ ಧೋರಣೆ, ಕನ್ನಡ ನೆಲ, ಜಲ ಭಾಷೆಗಳಿಗೆ ಗೌರವ ತರುವಂತಹ ಎಳ್ಳಷ್ಟು ಕೆಲಸ ಮಾಡದೇ, ಕನ್ನಡ ಭಾಷೆ, ಸಾಹಿತ್ಯಕ್ಕೆ ಅಗೌರವ ತೋರುವವರಾಗಿದ್ದಾರೆ ಎಂದು ದೂಡಿದರು.
ಇದಕ್ಕೆ ಸಾಕ್ಷಿಯಾಗಿ ಅವರ ವಿರುದ್ಧ ನ್ಯಾಯಾಲಯ ದಂಡ ವಿಧಿಸಿ ತೀರ್ಪು ಹೊರಡಿಸಿದೆ. ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಎಂ.ಆರ್.ಕುಮಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದರು. ಇದೀಗ ಅವರು ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದು, ಅವರೂ ಸಹ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಅರ್ಹರು ಎಂದು ಹೇಳಿದರು.
ರಾಜೀನಾಮೆ ನೀಡಲು ಮಹೇಶ್ ಜೋಶಿ ಮತ್ತೇ ಉದ್ದಟನ ತೋರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದರೆ, ಕೇಂದ್ರ ಕಸಾಪ ಕಛೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಎನ್.ಶೇಖರ್, ಪ್ರಧಾನ ಕಾರ್ಯದರ್ಶಿ ಟಿ.ಎಂ.ನಾಗರಾಜು, ಸದಸ್ಯ ಹೆಚ್.ಪಿ.ವೈರಮುಡಿ, ರೋಸ್ ಮೇರಿ ಇದ್ದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…