ಮಂಡ್ಯ

ಅಂಬೇಡ್ಕರ್ ಭವನವನ್ನು ಸಮರ್ಪಕವಾಗಿ ನಿರ್ವಹಿಸಿ : ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಮಯಕ್ಕೆ ಸರಿಯಾಗಿ ಸ್ವಚ್ಚಗೊಳಿಸಿ ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು.

ಇಂದು (ಜು.7) ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಬೇಡ್ಕರ್ ಭವನದ ನಿರ್ಮಾಣದ ಗುಣಮಟ್ಟದಲ್ಲಿ ತೊಂದರೆ ಇದೆ ಎಂದು ದೂರು ಸಲ್ಲಿಕೆಯಾಗಿತ್ತು, ಇದನ್ನು ಪರಿಶೀಲಿಸಿ ವರದಿ ಸಲ್ಲಿಕೆಯಾಗಿದೆ ಎಂದರು.

ಸ್ವಚ್ಛತೆ ಕಪಾಡಿ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜಿಸುವವರು ಸ್ವಚ್ಛತೆಗೆ ಆದ್ಯತೆ ನೀಡಿ, ಭವನಕ್ಕೆ ಆಗಮಿಸುವ ವೀಕ್ಷಕರಿಗೂ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಾಗೃತಿ ಮೂಡಿಸಿ, ಭವನದ ಹೊರ ಆವರಣ, ಶೌಚಾಲಯಗಳ ಸ್ವಚ್ಛತೆಗೆ ಆದ್ಯತೆ ನೀಡಿ ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಭವನದ ನಿರ್ವಹಣೆ 1 ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದ್ದು, ಮೊದಲನೇಯ ಹಂತದಲ್ಲಿ 25 ಲಕ್ಷ ಬಿಡುಗಡೆ ಮಾಡಲಾಗಿದೆ ಮೊದಲ ಹಂತದಲ್ಲಿ, ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಕುರ್ಚಿಗಳು, ಟೇಬಲ್ ಗಳು, ಫ್ಯಾನ್ ಗಳನ್ನು ಹಾಗೂ ಮಿನಿ ಹಾಲ್, ಜನರೇಟರ್, ಪೆಯಿಂಟಿಂಗ್, ವಾಟರ್ ಲೀಕೇಜ್ ದುರಸ್ತಿ, ಸಣ್ಣ ಪುಟ್ಟ ಕೆಲಸಗಳು ಅವಶ್ಯಕವಾಗಿದ್ದು ಇದನ್ನು ಅನುದಾನದ ಹಣದಲ್ಲಿ ಸರಿಪಡಿಸಲಾಗುವುದು ಎಂದರು.

ಅಧಿಕಾರಿಗಳು ಸರಿಯಾದ ಯೋಜನೆ ರೂಪಿಸಿ ಸಮಿತಿಗೆ ತಿಳಿಸಿದ ನಂತರ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ವಾರದೊಳಗಾಗಿ ಯೋಜನೆ ಸಿದ್ಧ ಪಡಿ‌ಸಿ ಎಂದರು.

ಮುಂದಿನ ಅನುದಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸೋಲಾರ್ ಅಳವಡಿಸುವ ಚಿಂತನೆಯಲ್ಲಿ ಇರುವುದಾಗಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ನಿರ್ಮಿತಿ ಕೇಂದ್ರದ ಜಯಪ್ರಕಾಶ್, ಡಾ.ಬಾಬು ಜಗಜೀವನರಾಂ ಸಂಘಟನೆಯ ಜಿಲ್ಲಾ ಅಧ್ಯಕ್ಷ ಎನ್.ಆರ್. ಚಂದ್ರಶೇಖರ್, ಮುಖಂಡರುಗಳಾದ ಗುರು ಪ್ರಸಾದ್, ವೆಂಕಟಗಿರಿಯಯ್ಯ, ಮಹೇಶ್ ಕೃಷ್ಣ, ಎನ್.ಬಿ. ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

5 hours ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

6 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

7 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

8 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

8 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

9 hours ago