ಮಂಡ್ಯ

ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯವಿರಲಿ: ನೀರಜ್‌ ಕುಮಾರ್‌

ಮಂಡ್ಯ: ಸಾರ್ವಜನಿಕರು ಮತಗಟ್ಟೆಗೆ ಬಂದು ಮತದಾನ ಮಾಡುವಾಗ ಅವರಿಗೆ ಕುಡಿಯುವ ನೀರು, ಶೌಚಾಲಯ, ರ‍್ಯಾಂಪ್ ಸೇರಿದಂತೆ ವಿವಿಧ ರೀತಿಯ ಮೂಲಭೂತ ಸೌಲಭ್ಯವಿರಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಾಮಾನ್ಯ ಚುನಾವಣಾ ವೀಕ್ಷಕರಾರ ನೀರಜ್ ಕುಮಾರ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಲೋಕಸಭಾ ಚುನಾವಣೆಯ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮತಗಟ್ಟೆಗಳನ್ನು ಪರಿಶೀಲಿಸಿಕೊಳ್ಳಿ ಜೊತೆಗೆ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವಲ್ಲಿ ಶ್ರಮಿಸಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹರಿಗೆ ಫಾರಂ 12 ಡಿ ನೀಡಿ ಸಮ್ಮತಿ ಪಡೆದಿರುವ ಬಗ್ಗೆ, ಮತದಾನಕ್ಕೆ ಮಾಡಿಕೊಂಡಿರುವ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದುಕೊಂಡ ವೀಕ್ಷಕರು. ಜಿಲ್ಲೆಯಲ್ಲಿ ಹೆಚ್ಚು ಮತದಾನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿ, ಸಾರ್ವಜನಿಕರಿಗೆ ಮತದಾನದ ಮಹತ್ವದ ಬಗ್ಗೆ ತಿಳಿಸಿ ಎಂದರು.

ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಸಾರ್ವಜನಿಕರು ಸಿ.ವಿಜಿಲ್ ಆ್ಯಪ್ ಮೂಲಕ ದೂರುಗಳನ್ನು ಸಲ್ಲಿಸಬಹುದಾಗಿದ್ದು, ಬಂದ ದೂರುಗಳನ್ನು 100 ನಿಮಿಷದಲ್ಲಿ ವಿಲೇವಾರಿ ಮಾಡಬೇಕು. ಯಾವುದೇ ಚುನಾವಣಾ ಅಕ್ರಮಗಳಿಗೆ ಅವಕಾಶ ನೀಡದಂತೆ ಚುನಾವಣಾ ಪ್ರಚಾರಗಳಿಗೆ ಬಳಸುವ ವಸ್ತುಗಳನ್ನು ಸರಿಯಾಗಿ ಲೆಕ್ಕ ಮಾಡಿ ವರದಿಯನ್ನು ವೆಚ್ಚವೀಕ್ಷಕರಿಗೆ ಒದಗಿಸಿ ಎಂದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ವೀಕ್ಷಕರುಗಳಿಗೆ ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳ ನೇಮಕ, ಮತದಾರರ ಸಂಖ್ಯೆ, ಮತಗಟ್ಟೆಗಳು, ಸೂಕ್ಷ್ಮ ಮತಗಟ್ಟೆ, ಚೆಕ್ ಪೋಸ್ಟ್, 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಮನೆಯಿಂದ ಮತದಾನ ಮಾಡಲು ಮಾಡಿರುವ ವ್ಯವಸ್ಥೆಗಳ ಬಗ್ಗೆ ವಿವರಿಸಿದರು.

ಚುನಾವಣಾ ವೆಚ್ಚ ವೀಕ್ಷಕರಾದ ಕುಮಾರ್ ಪ್ರಿಯತಮ್ ಅಶೋಕ್, ರೋಹಿತ್ ಅಸುದಾನಿ, ಪೊಲೀಸ್ ವೆಚ್ಚ ವೀಕ್ಷಕರಾದ ದೀಪ ಸತ್ಯನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಸಂಜೀವಪ್ಪ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

15 seconds ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

17 mins ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

29 mins ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

32 mins ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

40 mins ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

44 mins ago