Make Good Use of Lok Adalat: Judge Anand
ಮಂಡ್ಯ : ಈ ಬಾರಿಯ ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಕಾನೂನು ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಿದ್ದು, ಸಾರ್ವಜನಿಕರು ಲೋಕ್ ಅದಾಲತ್ಅನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಆನಂದ್ ಎಂ ಹೇಳಿದರು.
ಇಂದು (ಜು.05) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಜುಲೈ 12 ರಂದು ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸದರಿ ವರ್ಷದಲ್ಲಿ ನಡೆಯುತ್ತಿರುವ 2 ಲೋಕ್ ಅದಾಲತ್ ಇದಾಗಿದ್ದು, ಬಾಕಿ ಇರುವ ಸಿವಿಲ್ ಪ್ರಕರಣಗಳು, ವಿಭಾಗದ ದಾವೆಗಳು, ಹಣಕಾಸು ವಸೂಲಾತಿ ದಾವೆಗಳು, ಮೋಟಾರು ವಾಹನಗಳ ಪ್ರಕರಣಗಳು, ಎಂ.ಎಂ. ಆರ್. ಡಿ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು ಹಾಗೂ ರಾಜಿ ಆಗಬಹುದಾದಂತಹ ಕ್ರಿಮಿನಲ್ ಪ್ರಕರಣಗಳನ್ನು ತೆಗೆದುಕೊಂಡು ಇತ್ಯಾರ್ಥ ಮಾಡಲಾಗುವುದು ಎಂದರು.
ತಾಲ್ಲೂಕು ಕಾನೂನು ಸೇವಾ ಸಮಿತಿಯ ವತಿಯಿಂದ ತಾಲೂಕಿನ ಎಲ್ಲಾ ನ್ಯಾಯಾಲಯಗಳಲ್ಲಿ ವ್ಯಾಜ್ಯಪೂರ್ವ ಪ್ರಕಾರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ್ ಅದಾಲತ್ ನಲ್ಲಿ ಭಾಗವಹಿಸಿ ಪ್ರಕರಣಗಳನ್ನು ಕಾನೂನು ಬದ್ಧವಾಗಿ ಇತ್ಯರ್ಥಪಡಿಸಿಕೊಳ್ಳಿ ಎಂದು ಕರೆ ನೀಡಿದರು.
90 ದಿನಗಳ ಮಧ್ಯಸ್ಥಿಕೆ ಅಭಿಯಾನ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ಭಾರಿ 90 ದಿನಗಳ ಮಧ್ಯಸ್ಥಿಕೆ ಆಂದೋಲನವನ್ನು ಜುಲೈ 1 ರಿಂದ ಅಕ್ಟೋಬರ್ 7 ರವರೆಗೆ ಹಮ್ಮಿಕೊಳ್ಳಲಾಗಿದೆ,
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಧ್ಯಸ್ಥಿಕೆ ವಹಿಸುವ ಮೂಲಕ ವಿಲೇವಾರಿ ಮಾಡುವ ಗುರಿ ಹೊಂದಲಾಗಿದೆ, “ನೇಷನ್ 90 ಡೆಸ್” ಎಂಬ ಘೋಷವಾಕ್ಯದಡಿಯಲ್ಲಿ 7 ತಾಲ್ಲೂಕಿನಲ್ಲೂ ಮಧ್ಯಸ್ಥಿಕೆ ವಹಿಸಿ ಕಾನೂನು ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಮಧ್ಯಸ್ಥಿಕೆ ಡ್ರೈವ್ ನಲ್ಲಿ ನೂರಿತ ವಾಕೀಲರು ಹಾಗೂ ಕಕ್ಷಿದಾರರು ಇರುತ್ತಾರೆ ಇಬ್ಬರಿಗೂ ಸಹ ಸಮಾಧಾನ ತರುವ ರೀತಿಯಲ್ಲಿ ಹಾಗೂ ನ್ಯಾಯ ಸಮ್ಮತವಾಗಿ ಪ್ರಕರಣಗಳು ವಿಲೇವಾರಿ ಮಾಡಲಾಗುವುದು ಎಂದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…