ಮಂಡ್ಯ

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಗ್ಗಡೆಹಳ್ಳಿ ಗ್ರಾಮದ ನಿವಾಸಿ ದೀಪಕ್ ಅವರ ಪುತ್ರ ಎಚ್.ಡಿ.ತೇಜಸ್ ಎಂಬಾತನೇ ಮೃತ ಯುವಕ.

ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್‌ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ ಭಾನುವಾರ ತನ್ನ ಹನ್ನೊಂದು ಮಂದಿ ಸ್ನೇಹಿತರೊಂದಿಗೆ ಟೆಂಪೊ ಟ್ರಾವಲರ್‌ನಲ್ಲಿ ಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವಾಸ ಬಂದಿದ್ದನು. ಕಾವೇರಿ ನದಿಯಲ್ಲಿ ಈಜಾಡಲು ಹೋದಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ನುರಿತ ಸ್ಥಳೀಯ ಈಜುಗಾರರ ಸಹಾಯದಿಂದ ಯುವಕನ ಮೃತದೇಹವನ್ನು ಸೋಮವಾರ ಬೆಳಿಗ್ಗೆ ನದಿಯಿಂದ ಹೊರತೆಗೆಯಲಾಯಿತು.

ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

5 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

6 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

8 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

8 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

10 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

10 hours ago