ಮಂಡ್ಯ

ಮಳವಳ್ಳಿ | ಲಂಚ ; ಲೋಕಾ ಬಲೆಗೆ ಪೊಲೀಸ್‌ ಹೆಡ್ ಕಾನ್‌ಸ್ಟೆಬಲ್‌

ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ ಹಾಕುತ್ತಿದ್ದರು ಎನ್ನಲಾಗಿದೆ. ಇದರಿಂದ ನವೀನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇದನ್ನೂ ಓದಿ:-ಆನೆ,ಚಿರತೆ,ಹುಲಿ ದಾಳಿ ಬಳಿಕ ಹಂದಿ ಕಾಟ : ಕಾಡು ಹಂದಿ ದಾಳಿಗೆ ರೈತ ಬಲಿ

ಮಳವಳ್ಳಿ ಪಟ್ಟಣದ ಪೊಲೀಸ್ ಠಾಣೆ ಎದುರಿನಲ್ಲಿರುವ ಜ್ಯೂಸ್ ಬರ್ಗ್ ಅಂಗಡಿಯಲ್ಲಿ ಗುರುವಾರ ಸಂಜೆ ಪೇದೆ ವೆಂಕಟೇಶ್ ಅವರು 5 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಡಿವೈಎಸ್‌ಪಿ ಸುನಿಲ್ ಕುಮಾರ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಬ್ಯಾಟರಾಯಗೌಡ ಮತ್ತು ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಿದ್ದಾರೆ.

ದಾಳಿಯಲ್ಲಿ ಲೋಕಾಯುಕ್ತ ಸಿಬ್ಬಂದಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

2 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

2 hours ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

12 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

12 hours ago