ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ ದಿಂದ ಕಾರ್ಮಿಕ ಬಲಿಯಾಗಿದ್ದಾನೆಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ನಂದೀಶ (೨೫) ಮೃತ ಕಾರ್ಮಿಕ.
ಸೆಸ್ಕ್‌ನ ಮಾದರಿ ಗ್ರಾಮ ಯೋಜನೆಯಡಿ ಕಲ್ಕುಣಿ ಗ್ರಾಮದ ಬಳಿಯ ಚಿಕ್ಕಕಲ್ಕುಣಿ ರಸ್ತೆಯಲ್ಲಿ ಗುರುವಾರ ಸಂಜೆ ೬.೩೦ರ ಸಮಯದಲ್ಲಿ ಗುತ್ತಿಗೆದಾರರ ಮೂಲಕ ಹಳೇ ವಿದ್ಯುತ್ ವೈರ್‌ಗಳ ಬದಲಾವಣೆ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಇದನ್ನೂ ಓದಿ :-2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ
ವಿದ್ಯುತ್ ಕಂಬವನ್ನೇರಿ ತಂತಿಯನ್ನು ಬದಲಾಯಿಸುವ ವೇಳೆ ವಿದ್ಯುತ್ ತಗುಲಿ ಕಂಬದಿಂದ ಕೆಳಗೆ ಬಿದ್ದು ಮೃತಪಟ್ಟನೆಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಸೆಸ್ಕ್ ಅಧಿಕಾರಿಗಳು ಇಲ್ಲದಿರುವುದು ಇದಕ್ಕೆ ಕಾರಣವೆನ್ನಲಾಗಿದೆ.
ಶವವನ್ನು ಮಳವಳ್ಳಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಮೃತನ ವಾರಸುದಾರರು ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.




