ಮಂಡ್ಯ

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ.

ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ ಅದರಲ್ಲೂ ಜನನಿಬಿಡದ ಪ್ರದೇಶದಲ್ಲಿಯೇ ಚಿರತೆ ಕಾಣಿಸಿಕೊಂಡಿರುವ ಜನರಲ್ಲಿ ಆತಂಕ ಸೃಷ್ಟಿಸಿದೆ. ಬುಧವಾರ ರಾತ್ರಿ ಗ್ರಾಮದ ಟಿ.ಕೆ.ಮನು, ಟಿ.ಎಸ್.ಅಭಿಷೇಕ್ ಗೌಡ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಣ್ಣೇಸ್ವಾಮಿ ಎಂಬುವವರ ಮನೆಯ ಬಳಿ ಚಿರತೆ ರಸ್ತೆ ದಾಟುತ್ತಿದ್ದನ್ನು ಕಾರು ನಿಲ್ಲಿಸಿದ್ದಾರೆ.

ಬೃಹತ್ ಗಾತ್ರದ ಚಿರತೆ ಕಂಡ ಕಾರು ಚಾಲಕ ಟಿ.ಕೆ.ಮನು ಅವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಇದೇ ರಸ್ತೆಯಲ್ಲಿ ಕಳೆದ ವಾರದ ಹಿಂದೆ ಸಹ ಚಿರತೆ ಕಾಣಿಸಿಕೊಂಡಿತ್ತು.

ಕಳೆದ ಹಲವಾರು ತಿಂಗಳಿಂದ ಗ್ರಾಮದ ಸುತ್ತಮುತ್ತ ಐದಾರು ಚಿರತೆಗಳು ಓಡಾಟ ನಡೆಸುತ್ತಿದ್ದು, 10ಕ್ಕೂ ಹೆಚ್ಚು ಸಾಕು ಪ್ರಾಣಿಗಳನ್ನು ಬಲಿ ಪಡೆದಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಗ್ರಾಮದ ಹನುಮಂತು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago