ಮಂಡ್ಯ

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪರಶಿವಮೂರ್ತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವ ಚಲುವರಾಯಸ್ವಾಮಿ ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ ಅವರು, ಪರಶಿವಮೂರ್ತಿ ಅವರು ಸಜ್ಜನಿಕೆಯ, ಸರಳತೆಯ ಪ್ರತೀಕವಾಗಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದ ಅವರು ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು. ಅವರ ಅಗಲಿಕೆ ಕುಟುಂಬಕ್ಕೆ ಹಾಗೂ ಮಳವಳ್ಳಿ ಭಾಗದ ಜನತೆಗೆ ತುಂಬಲಾರದ ನಷ್ಟ. ಶಾಸಕ ನರೇಂದ್ರಸ್ವಾಮಿ ಅವರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.”

ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬ ವರ್ಗ, ಬಂಧು-ಬಳಗ ಹಾಗೂ ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಚಿವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

8 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

2 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago