Mysore
28
broken clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲೂರು ಗ್ರಾಮದ ಮುತ್ತುಸ್ವಾಮಿ, ರಾಜು, ಚಂದ್ರು ಮತ್ತು ಹಲಗೂರು ಹೋಬಳಿ ಮಾಸ್ಟರ್ ದೊಡ್ಡಿಯ ಮಹೇಶ್ ಬಂಧಿತ ಆರೋಪಿಗಳು.

ಬೆಂಗಳೂರಿನ ಜೆ.ಪಿ‌.ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತ ಅವರ ಮೇಲೆ ಮಾರ್ಚ್ 15 ರಂದು ಭಾನುವಾರ ರಾತ್ರಿ 9 ರ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಇಬ್ಬರು ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು ಚಿನ್ನದ ಅಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್ಐ ಲೋಕೇಶ್ ಅವರ ತಂಡವು ತ್ವರಿತಗತಿಯಲ್ಲಿ ದುಷ್ಕರ್ಮಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಿಪಿಐ ಶ್ರೀಧರ್ ತಿಳಿಸಿದರು.

Tags:
error: Content is protected !!