ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲೂರು ಗ್ರಾಮದ ಮುತ್ತುಸ್ವಾಮಿ, ರಾಜು, ಚಂದ್ರು ಮತ್ತು ಹಲಗೂರು ಹೋಬಳಿ ಮಾಸ್ಟರ್ ದೊಡ್ಡಿಯ ಮಹೇಶ್ ಬಂಧಿತ ಆರೋಪಿಗಳು.
ಬೆಂಗಳೂರಿನ ಜೆ.ಪಿ.ನಗರ ನಿವಾಸಿ ಯಶೋಧಮ್ಮ ಮಾಲೀಕತ್ವದ ತೋಟದ ಮನೆಯಲ್ಲಿ ಜಮೀನು ಕೆಲಸ ಮಾಡಿಕೊಂಡಿದ್ದ ಚಂದ್ರು ಮತ್ತು ಕವಿತ ಅವರ ಮೇಲೆ ಮಾರ್ಚ್ 15 ರಂದು ಭಾನುವಾರ ರಾತ್ರಿ 9 ರ ಸಮಯದಲ್ಲಿ ಏಕಾಏಕಿ ದಾಳಿ ಮಾಡಿದ ಇಬ್ಬರು ದುಷ್ಕರ್ಮಿಗಳು ಮಾರಾಕಾಸ್ತ್ರಗಳನ್ನು ಚಿನ್ನದ ಅಭರಣವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನತ್ತಿದ ಹಲಗೂರು ಸರ್ಕಲ್ ಇನ್ಸ್‌ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್ಐ ಲೋಕೇಶ್ ಅವರ ತಂಡವು ತ್ವರಿತಗತಿಯಲ್ಲಿ ದುಷ್ಕರ್ಮಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಸಿಪಿಐ ಶ್ರೀಧರ್ ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…