Mysore
22
haze

Social Media

ಭಾನುವಾರ, 25 ಜನವರಿ 2026
Light
Dark

ಮಳವಳ್ಳಿ | ಸಾರಿಗೆ ಬಸ್‌ಗಳ ಡಿಕ್ಕಿ ; ಪ್ರಯಾಣಿಕರಿಗೆ ಗಾಯ

ಮಳವಳ್ಳಿ : ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 14 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬೊಪ್ಪೇಗೌಡನಪುರ(ಬಿ.ಜಿ ಪುರ) ಹೋಬಳಿಯ ರಾಷ್ಟ್ರೀಯ ಹೆದ್ದಾರಿ-2029ರಲ್ಲಿ ನಡೆದಿದೆ.

ಗುರುವಾರ ಸಂಜೆ ಮಲೆ ಮಹದೇಶ್ವರಸ್ವಾಮಿ ಬೆಟ್ಟದಿಂದ ಸಾರಿಗೆ ಬಸ್ ಬರುತಿದ್ದ ಪಂಡಿತಹಳ್ಳಿ ಹೆದ್ದಾರಿ ಬಳಿ ನಿಲ್ಲಿಸುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಸಾರಿಗೆ ಬಸ್‌ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‌ನಲ್ಲಿದ್ದ 14 ಮಂದಿಗೆ ಗಂಭೀರ ಗಾಯವಾಗಿದೆ. ಇಬ್ಬರು ಮಹಿಳೆಯರ ಕಾಲು ಮುರಿದಿದೆ.

ಬಳಿಕ ಗಾಯಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!