Mysore
33
scattered clouds

Social Media

ಗುರುವಾರ, 28 ಮೇ 2026
Light
Dark

ಮಂಡ್ಯ| ಕಾವೇರಿ ನದಿಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರಿನ ವಿಕ್ರಾಂತ್‌ ಕಾರ್ಖಾನೆ ನೌಕರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದ ಬಳಿ ನಡೆದಿದೆ.

ಹುಣಸೂರು ಮೂಲದ ಮಹೇಶ್‌ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಶ್ರೀರಂಗಪಟ್ಟಣದ ತರೀಪುರ ಗ್ರಾಮದಲ್ಲಿ ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಮಹೇಶ್‌ ಸ್ನೇಹಿತರ ಜೊತೆ ಬಂದಿದ್ದರು.

ಬೆಳಿಗ್ಗೆ ನದಿಯಲ್ಲಿ ಸ್ನಾನಕ್ಕೆಂದು ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿ ಮಹೇಶ್‌ ಸಾವನ್ನಪ್ಪಿದ್ದಾರೆ. ಈ ಸಂಬಂಧ ಅರೆಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!