ಮಂಡ್ಯ

ಗಣೇಶ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್‌ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್‌ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ. ಕಳೆದ ರಾತ್ರಿ ಗಣಪತಿ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್‌ಗೆ ಡ್ಯಾನ್ಸ್‌ ಮಾಡುತ್ತಿದ್ದರು.

ಗ್ರಾಮಸ್ಥರೊಂದಿಗೆ ಮಂಜುನಾಥ್‌ ಸಹ ಕುಣಿದು ಕುಪ್ಪಳಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆ ಹಿಡಿದುಕೊಂಡು ಅವರು ಕುಸಿದುಬಿದ್ದಿದ್ದಾರೆ. ಜೊತೆಯಲ್ಲಿದ್ದವರು ನೋಡುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

19 mins ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

21 mins ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

58 mins ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

1 hour ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

1 hour ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

3 hours ago