ಮದ್ದೂರು: ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ವೇನಲ್ಲಿ ಮದ್ಯಪಾನ ಮಾಡಿ ಮನಬಂದಂತೆ ಕಾರು ಚಾಲನೆ ಮಾಡಿದ ಚಾಲಕನಿಗೆ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ 69000 ರೂಪಾಯಿ ದಂಡ ವಿಧಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಧನಂಜಯ ಎಂಬಾತನಿಗೆ ನ್ಯಾಯಾಲಯ ದಂಡ ವಿಧಿಸಿದೆ. ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಕಳೆದ ಭಾನುವಾರ ( ಮಾರ್ಚ್ 17 ) ಸಂಜೆ ಮದ್ಯದ ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ತನ್ನ ಎರ್ಟಿಗಾ ಕಾರು ಚಾಲನೆ ಮಾಡಿದ್ದ ಧನಂಜಯ ಇತರೆ ವಾಹನ ಸವಾರರಿಗೆ ಆತಂಕ ಸೃಷ್ಟಿಸಿದ್ದ.
ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಇದನ್ನು ಗಮನಿಸಿ ಪರಿಶೀಲಿಸಿದಾಗ ಧನಂಜಯ ಸೇರಿದಂತೆ ಕಾರಿನಲ್ಲಿದ್ದ ಇತರೆ ಐವರೂ ಸಹ ಮದ್ಯಪಾನ ಮಾಡಿರುವುದು ತಿಳಿದುಬಂದಿದೆ. ಇನ್ನು ತಪಾಸಣೆ ವೇಳೆ ಪೊಲೀಸರ ಜತೆ ಸಹ ಅಸಭ್ಯವಾಗಿ ವರ್ತಿಸಿದ್ದು, ಸಾರ್ವಜನಿಕ ದೂರಿನ ಅನ್ವಯ ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಈ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಪ್ರಿಯಾಂಕ ಕಾರು ಚಾಲಕ ಧನಂಜಯ ಹಾಗೂ ಆತನ ಸ್ನೇಹಿತರಿಗೆ ದಂಡ ವಿಧಿಸಿದ್ದಾರೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…