Mysore
29
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್ ಕೊಲೆಯಾದ ವ್ಯಕ್ತಿ.

ಗಾಂಧಿನಗರದ ನಿವಾಸಿಗಳಾದ ಮನು, ಕಮಲೇಶ್, ಪುನೀತ್ ಸೇರಿದಂತೆ ಹಲವರು ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಕೆಲ ದಿನಗಳ ಹಿಂದಷ್ಟೇ ಕ್ಷುಲಕ ವಿಚಾರಕ್ಕೆ ಪುರುಷೋತ್ತಮ್ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ಇದೇ ದ್ವೇಷದ ಹಿನ್ನೆಲೆಯಲ್ಲಿ ರಾತ್ರಿ ಆಟೋದಲ್ಲಿ ಮಲಗಿದ್ದ ವೇಳೆ ಪುರುಷೋತ್ತಮ್‌ರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:
error: Content is protected !!