ಮಂಡ್ಯ: ಜಿಲ್ಲೆಯ ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಅಪಘಾತವಾದ ಪರಿಣಾಮ 33 ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಈ ವೇಳೆ ಅವಶ್ಯಕವಿದ್ದಲ್ಲಿ ಗಾಯಾಳುಗಳನ್ನು ಮಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ಅದರ ಖರ್ಚು ವೆಚ್ಚವನ್ನೆಲ್ಲಾ ಕೆಎಸ್‌ಆರ್‌ಟಿಸಿ ವತಿಯಿಂದಲೇ ಭರಿಸುವಂತೆ ಸೂಚನೆ ನೀಡಿದರು.