ಮಂಡ್ಯ

ಮದ್ದೂರಿನಲ್ಲಿ ಬಸ್‌ ಅಪಘಾತ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಡಾ.ಕುಮಾರ್‌

ಮಂಡ್ಯ: ಜಿಲ್ಲೆಯ ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಅಪಘಾತವಾದ ಪರಿಣಾಮ 33 ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್‌ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಈ ವೇಳೆ ಅವಶ್ಯಕವಿದ್ದಲ್ಲಿ ಗಾಯಾಳುಗಳನ್ನು ಮಿಮ್ಸ್‌ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ಅದರ ಖರ್ಚು ವೆಚ್ಚವನ್ನೆಲ್ಲಾ ಕೆಎಸ್‌ಆರ್‌ಟಿಸಿ ವತಿಯಿಂದಲೇ ಭರಿಸುವಂತೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…

29 mins ago

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…

39 mins ago

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…

45 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

1 hour ago

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

1 hour ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

2 hours ago