ಮಂಡ್ಯ : ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳಲ್ಲಿ ಮಂಡ್ಯ ಜಿಲ್ಲೆಗೆ 10 ಸಾವಿರಕ್ಕೂ ಹೆಚ್ಚು ಅನುದಾನವನ್ನು ಜಿಲ್ಲೆಯ ಅಭಿವೃದ್ಧಿಗೆ ತರಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದವರು ಇಂದು ರಾಷ್ಟ್ರಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡಿದಷ್ಟು ಇನ್ಯಾವುದೇ ರಾಜ್ಯಗಳಲ್ಲಿ ನೀಡಿಲ್ಲ ಎಂದು ಹೇಳಿದರು.
ಪಂಚ ಗ್ಯಾರಂಟಿಗಳ ಮೂಲಕ ಪ್ರತಿ ತಾಲೂಕಿಗೆ ವಾರ್ಷಿಕ ರೂ 250 ಕೋಟಿ ಅನುದಾನವನ್ನು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲೂ ಸಹ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ. ಮುಂದಿನ 2028ರ ಚುನಾವಣೆಯಲ್ಲೂ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಪಂಚ ಗ್ಯಾರಂಟಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದರು.
ಕೃಷಿ ಇಲಾಖೆ ವತಿಯಿಂದ ಸದರಿ ವರ್ಷದ ಏಪ್ರಿಲ್ ನಿಂದ ಇಲ್ಲಿಯವರೆಗೂ ಕೊಪ್ಪ ಹೋಬಳಿಯ 520 ಫಲಾನುಭವಿಗಳಿಗೆ 150 ಲಕ್ಷ ರೂಗಳ ಸಹಾಯಧನ ನೀಡಲಾಗಿದೆ. ಒಟ್ಟು ಜಿಲ್ಲೆಯಲ್ಲಿ 49,330 ಫಲಾನುಭವಿಗಳಿಗೆ ಕೃಷಿ ಇಲಾಖೆಯ ವಿವಿಧ ಯೋಜನೆಗಳಿಂದ 2390.80 ಲಕ್ಷಗಳ ಸಹಾಯಧನ ನೀಡಲಾಗಿದೆ. ಒಬ್ಬರಿಗೆ ಸುಮಾರು 50 ಲಕ್ಷದವರೆಗೂ ಸಬ್ಸಿಡಿ ನೀಡಲಾಗಿದೆ ಎಂದರು.
ಇದನ್ನು ಓದಿ: SBIನಲ್ಲಿ ವಿವಿಧ ಹುದ್ದೆಗಳ ನೇಮಕಾತಿ : ಇಂದೇ ಅರ್ಜಿ ಸಲ್ಲಿಸಿ
ನಮ್ಮ ಸರ್ಕಾರ ವಿವಿಧ ಯೋಜನೆಗಳ ಮೂಲಕ ಜನರಿಗೆ ಅಭಿವೃದ್ಧಿ ಕಾರ್ಯವನ್ನು ಮಾಡಲಾಗುತ್ತಿದೆ. ಕೊಪ್ಪ ಹೋಬಳಿಯಲ್ಲಿ ಇಲ್ಲಿಯವರೆಗೆ 1300 ಹೊಸ ಪೌತಿ ಖಾತೆ, 5800 ಹಳೆ ಪೌತಿ ಖಾತೆ ಹಾಗೂ 150 ಪೊಡಿ ಗಳನ್ನು ಪೌತಿ ಖಾತೆ ಆಂದೋಲನದ ಮೂಲಕ ಮಾಡಲಾಗಿದೆ. ಎಂದು ವಿವರಿಸಿದರು ಜಿಲ್ಲೆಯಲ್ಲಿ ಸುಮಾರು 18.31 ಸಾವಿರ ಕಂದಾಯ ಇಲಾಖೆಯ ದಾಖಲೆ ಹಾಳೆಗಳನ್ನು ಈಗಾಗಲೇ ಸ್ಕ್ಯಾನ್ ಮಾಡಲಾಗಿದೆ. 33 ಸಾವಿರ ಕಂದಾಯ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಹೇಳಿದರು.
ಕೃಷಿ ಸಚಿವನಾದ ನಂತರವೂ ಸಹ ಪ್ರತಿ ವಾರ ಕನಿಷ್ಠ ಒಂದು ಬಾರಿಯಾದರೂ ಜಿಲ್ಲೆಗೆ ಬಂದು ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುತ್ತಿದ್ದೇನೆ. ನಮ್ಮ ದೇಶದಲ್ಲಿ ಸುಮಾರು 60% ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ನಾನು ಕೃಷಿ ಸಚಿವನಾಗಿರುವುದರಿಂದ ಜವಾಬ್ದಾರಿ ಹೆಚ್ಚಿದೆ ಜನರು ಸಚಿವರ ಕಚೇರಿಗೆ ಭೇಟಿ ನೀಡಿ ತಮ್ಮ ಅಹವಾಲು ಗಳನ್ನು ಸಲ್ಲಿಸಬಹುದು. ಕಾನೂನಿನ ಪ್ರಕಾರ ಮಾಡಬಹುದಾದ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಎರಡುವರೆ ವರ್ಷಗಳಿಂದ ಕೊಪ್ಪ ಹೋಬಳಿಯ ಅಭಿವೃಧ್ಧಿಗೆ ಸರಿಸುಮಾರು 300 ರಿಂದ 400 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕೊಪ್ಪದಲ್ಲಿ ನಾಡಕಚೇರಿ ತೆರೆಯಲು 45 ಲಕ್ಷ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಹೇಳಿದರು.
ಜಿಲ್ಲೆಯ ರೈತರ ಅಭಿವೃದ್ಧಿಗಾಗಿ ಮಂಡ್ಯ ಜಿಲ್ಲೆಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ತರಲಾಗಿದೆ. ಫಿಲಿಪೈನ್ಸ್ ದೇಶದ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ನಮ್ಮ ವಾತಾವರಣಕ್ಕೆ ಸರಿಹೊಂದುವ ಹೊಸ ಭತ್ತದ ತಳಿಗಳನ್ನು ಜಿಲ್ಲೆಗೆ ತರಲು ಒಡಂಬಡಿಕೆ ಮಾಡಲಾಗಿದೆ. ಈಗಾಗಲೇ ಗುರುತಿಸಲಾದ ಭತ್ತದ ತಳಿಯನ್ನು ನಮ್ಮದೇ ರಾಜ್ಯದ ನಾಗಮಂಗಲ ಹಾಗೂ ಮಳವಳ್ಳಿಯ ವಿಜ್ಞಾನಿಗಳು ಅಭಿವೃದ್ಧಿ ಪಡಿಸಿದ ಭತ್ತದ ತಳಿಯನ್ನು ರಾಜ್ಯಕ್ಕೆ ತರಲಾಗುವುದು ಎಂದು ಹೇಳಿದರು.
ಜಿಲ್ಲೆಯ ರೈತರ ಬೇಡಿಕೆಗೆ ಸ್ಪಂದಿಸಿ ಮುಂದಿನ ಸೋಮವಾರದಿಂದ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ನೋಂದಣಿ ರೈತರಿಂದ ಬಂದಿಲ್ಲವಾದರು ಭತ್ತ ಮತ್ತು ರಾಗಿ ಖರೀದಿಯನ್ನು ಪ್ರಾರಂಭಿಸಲಾಗುವುದು ಎಂದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಮಾತನಾಡಿ 3500 ಕೋಟಿ ಅನುದಾನವನ್ನು ಮಂಡ್ಯ ಜಿಲ್ಲೆಯ ನೀರಾವರಿ ಅಭಿವೃದ್ಧಿಗೆ ಕೃಷಿ ಸಚಿವರು ತಂದಿದ್ದಾರೆ. ಮಂಡ್ಯ ಜಿಲ್ಲೆಯ ಇತಿಹಾಸದಲ್ಲೇ ಯಾರು ನೀರಾವರಿ ಅಭಿವೃದ್ಧಿಗೆ ಇಷ್ಟು ಅನುದಾನವನ್ನು ತಂದಿಲ್ಲ. ಕೊಪ್ಪ ಭಾಗದ ವಿವಿಧ ಕಾಮಗಾರಿಗಳಿಗೆ 137.99 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದರು.
ಮಂಡ್ಯ ಜನರ ಜೀವನಾಡಿ ಮೈ ಶುಗರ್ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿತ್ತು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಕೃಷಿ ಸಚಿವರು ಮುಖ್ಯಮಂತ್ರಿಗಳ ಬಳಿ ಇದರ ಕುರಿತು ಪ್ರಸ್ಥಾಪಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 50 ಕೋಟಿ ಅನುದಾನವನ್ನು ಮೈ ಶುಗರ್ ಕಾರ್ಖಾನೆ ಬಿಡುಗಡೆ ಮಾಡಿ ಮೈ ಶುಗರ್ ಕಾರ್ಖಾನೆ ಪುನಶ್ಚೇತನ ಮಾಡಿದ್ದಾರೆ ಎಂದು ತಿಳಿಸಿದರು.
ಇದನ್ನು ಓದಿ: ಎಂಎಂ ಹಿಲ್ಸ್ ವನ್ಯಜೀವಿ ಅರಣ್ಯ ವ್ಯಾಪ್ತಿಯಲ್ಲಿ ಪೊಲೀಸ್ ಚೆಕ್‌ಪೋಸ್ಟ್ ರಚಿಸಲು ಆದೇಶ
ರಾಜ್ಯ ಸರ್ಕಾರ ರಾಜ್ಯದ ಜನರ ಅಭಿವೃದ್ಧಿಗಾಗಿ ಗ್ಯಾರಂಟಿ ಯೋಜನೆಗಳ ಜಾರಿಗೆ ತಂದರು. ಮಂಡ್ಯ ಜಿಲ್ಲೆಯ 4 ಲಕ್ಷಕ್ಕೂ ಅಧಿಕ ಮಹಿಳೆಯರ ಖಾತೆಗೆ ರೂ ಎರಡು ಸಾವಿರ ಹಣವನ್ನು ಡಿ.ಬಿ.ಟಿ ಮೂಲಕ ಪಾವತಿಸಲಾಗುತ್ತಿದೆ. 3 ತಿಂಗಳ ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ ಇದರ ಕುರಿತು ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗಿದೆ ಶ್ರೀಘ್ರವಾಗಿ ಗೃಹ ಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ 4 ಲಕ್ಷಕ್ಕೂ ಅಧಿಕ ಮನೆಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಕರ್ಯ ನೀಡಲಾಗಿದೆ. ಇಲ್ಲಿಯವರೆಗೂ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಗೆ 473 ಕೋಟಿ ಅನುದಾನವನ್ನು ನೀಡಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯ 18.60 ಕೋಟಿ ಜನ ಮಹಿಳೆಯರಿಗೆ ಟಿಕೇಟ್ ವಿತರಿಸಲಾಗಿದೆ ಸುಮಾರು 493 ಕೋಟಿ ಅನುದಾನವನ್ನು ನೀಡಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 4900 ಫಲಾನುಭವಿಗಳು ಇದ್ದಾರೆ ಇಲ್ಲಿಯವರೆಗೂ 18.50 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ನಂತರ ಕೊಪ್ಪ ಹೋಬಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಉದ್ಘಾಟನೆಯನ್ನು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಾಡಿದರು.
ನಂತರ ದರಖಾಸ್ತು ಪೋಡಿ ಆಂದೋಲನದ ಫಲಾನುಭವಿಗಳಿಗೆ ಪತ್ರ ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಉಪ ವಿಭಾಗಾಧಿಕಾರಿ ಶಿವಮೂರ್ತಿ, ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೆರೆ, ಮದ್ದೂರು ಕಾರ್ಯ ನಿರ್ವಾಹಕ ಅಧಿಕಾರಿ ರಾಮಲಿಂಗ್ಯ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಕಾವೇರಿ ನೀರಾವರಿ ನಿಗಮದ ರಾಘುರಾಮ್, ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕೊಟ್ಟಿಗೆಯಾರ್ ,ಕಾಂಗ್ರೆಸ್ ಮುಖಂಡ ದಿವಾಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…