ಮಂಡ್ಯ: ನಗರದಲ್ಲಿರುವ ಉದ್ಯಾನವನ ಅಭಿವೃದ್ಧಿಗೆ 10 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿದ್ದು, ಅನುದಾನವ್ನು ಸಪರ್ಮಕವಾಗಿ ಬಳಸಿಕೊಂಡು ಕೆಂಪೇಗೌಡ ಉದ್ಯನವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಂಡ್ಯ ಶಾಸಕ ಪಿ.ರವಿಕುಮಾರ್ ತಿಳಿಸಿದರು.
ಇಂದು(ಜೂ.20) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಬಿಡುಗಡೆಯಾಗಿರುವ ಅನುದಾನದಲ್ಲಿ ಉದ್ಯಾನವನ ಅಭಿವೃದ್ಧಿ ಪಡಿಸಲಾಗುವುದು. ಮುಂದಿನ ದಿನಗಳಲ್ಲಿ ಸಂಘ ಸಂಸ್ಥೆಗಳು ಒಟ್ಟಿಗೆ ಸೇರಿ ಚರ್ಚಿಸಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಕುರಿತು ತೀರ್ಮಾನಿಸೋಣ ಎಂದರು.
ಜೂನ್ 30 ರಂದು ಕೆಂಪೇಗೌಡ ಜಯಂತಿ:
ಜೂನ್ 30 ಭಾನುವಾರವಾಗಿದ್ದು ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಕೃಷಿ ಸಚಿವರು ಹಾಗೂ ಬೃಹತ್ ಕೈಗಾರಿಕಾ ಸಚಿವರು ಸಹ ಜೂನ್ 30 ರಂದು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಜೂನ್ 27 ರ ಬದಲಾಗಿ ಜೂನ್ 30 ರಂದು ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ನಡೆಸೋಣ ಎಂದು ಹೇಳಿದರು.
ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಗೆ ಪ್ರತಿ ತಾಲ್ಲೂಕಿಗೂ 1 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರತಿ ತಾಲ್ಲೂಕಿಗೂ 50 ಸಾವಿರ ಅನುದಾನ ನೀಡಲಾಗುತ್ತಿತ್ತು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಈ ಬಾರಿ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಜಯಂತಿ ಆಚರಿಸಲು ಪ್ರತಿ ತಾಲ್ಲೂಕಿಗೆ ಒಂದು ಲಕ್ಷ ರೂ ಅನುದಾನ ನೀಡಿರುತ್ತಾರೆ ಎಂದರು.
ಜೂನ್ 30 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಅಂಬೇಡ್ಕರ್ ಭವನದವರೆಗೆ ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಮೆರವಣಿಗೆ ನಡೆಯಲಿದೆ. ಇದರೊಂದಿಗೆ ವಿವಿಧ ಕಲಾತಂಡಗಳು ಭಾಗವಹಿಸಲಿದೆ. ಸಂಘ ಸಂಸ್ಥೆಗಳ ಮುಖ್ಯಸ್ಥರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಿಸಬೇಕು ಎಂದು ಹೇಳಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳು ಅಂದಿನ ಸಂಜೆ 6 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಇದರೊಂದಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಐದು ಮಹಾನ್ ವ್ಯಕ್ತಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಮಾತನಾಡಿ, ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಹೆಚ್ಚು ಜನ ಭಾಗವಹಿಸಲು ಹಾಗೂ ಸಂಪನ್ಮೂಲಗಳ ಕ್ರೋಡೀಕರಣದಲ್ಲಿ ಸಂಘ ಸಂಸ್ಥೆಗಳ ಪಾತ್ರ ದೊಡ್ಡದ್ದು, ಕೆಂಪೇಗೌಡರ ಜಯಂತಿ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲರೂ ಭಾಗವಹಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಫಲಿಸದ ಪ್ರಾರ್ಥನೆ: ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ಕೊನೆಯುಸಿರು ಮಡಿಕೇರಿ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ…
ಬೆಂಗಳೂರು: ಬಿಜೆಪಿಯವರು ತಮ್ಮ ವಿರುದ್ಧ ಹಾರಾಡಿ, ಚೀರಾಡಿ, ಬಟ್ಟೆ ಹರಿದುಕೊಂಡರೂ ತಾವು ತಲೆಕೆಡಿಸಿಕೊಳ್ಳುವುದಿಲ್ಲ ಯಾರಿಗೇ ದೂರು ನೀಡಿದರೂ ಹೆದರುವುದಿಲ್ಲ ಎಂದು…
ಬೆಂಗಳೂರು: ಅತ್ಯಂತ ವಿಶಿಷ್ಟವಾದ ಹವ್ಯಕ ಭಾಷೆ ಉಳಿಯಬೇಕು, ಈ ಭಾಷೆ ಉಳಿಯುವ ನಿಟ್ಟಿನಲ್ಲಿ ನಾನು ನಿಮ್ಮೊಂದಿಗೆ ಇರುತ್ತೇನೆ ಎಂದು ಕೇಂದ್ರದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ತೋರುವಂತಿಲ್ಲ.ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದಲ್ಲಿ ರೈತ ಬೆಳೆದಿದ್ದ ಒಂದು ಟನ್ ನೇಂದ್ರ ಬಾಳೆಯನ್ನು ದುಷ್ಕರ್ಮಿಗಳು ಕಳವು ಮಾಡಿರುವ ಘಟನೆ ನಡೆದಿದೆ.…
ಮೈಸೂರು: ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ ತಮ್ಮ ದಾಂಪತ್ಯ ಜೀವನದ ಬಗ್ಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೊಸ…