ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲಿಸಲಾಯಿತು.
ಫೆ. 20ರಿಂದ 3 ದಿನಗಳ ಕಾಲ ಹೆಲಿ ಟೂರಿಸಂ ಅನ್ನು ಆಯೋಜನೆ ಮಾಡಲಾಗಿದ್ದು ಸಾರ್ವಜನಿಕರು ಹೆಲಿಕಾಪ್ಟರ್ ಮೂಲಕ ಬೂದನೂರು ಉತ್ಸವವನ್ನು ಕಣ್ತುಂಬಿಕೊಳ್ಳಬಹುದು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್.ನಂದಿನಿ ಅವರು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಹೋಟೆಲ್ ಅಮರಾವತಿ ಬಳಿ ಇರುವ ಸ್ಥಳವನ್ನು ಪರಿಶೀಲನೆ ನಡೆಸಿದರು.
ಉಪವಿಭಾಗಾಧಿಕಾರಿ ಶಿವಮೂರ್ತಿ, ಅಪರ ಪೊಲೀಸ್ ಅಧಿಕ್ಷಕ ಸಿ.ಇ.ತಿಮ್ಮಯ್ಯ ಹಾಜರಿದ್ದರು.





