ಮಂಡ್ಯ : ಜಿಲ್ಲೆಯಲ್ಲಿ 41 ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿಗಳು ಇವೆ ಎಂಬುದು ಹೆಮ್ಮೆಯ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ಇಂದು (ಮಾ.24) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಕ್ಷಯರೋಗಕ್ಕೆ ಸಾರ್ವಜನಿಕರು ಹೆದರುತ್ತಿದ್ದರು ದಿನಕ್ಕೆ ಸರಿ ಸುಮಾರು 9000 ಜನ ಕ್ಷಯ ರೋಗಕ್ಕೆ ಬಲಿಯಾಗುತ್ತಿದ್ದರು ಎಂದು ಅಂಕಿ ಅಂಶಗಳು ಹೇಳುತ್ತವೆ ಎಂದರು.
ಅಂದಿನಿಂದ ಇಂದಿನವರೆಗೂ ಆರೋಗ್ಯ ಇಲಾಖೆ ಕ್ಷಯ ರೋಗ ನಿರ್ಮೂಲನೆ ಮಾಡಲು ಹೋರಾಟ ನಡೆಸುತ್ತಲೆ ಇದ್ದಾರೆ. ಕ್ಷಯ ರೋಗವನ್ನು ನಿಯಂತ್ರಿಸಲು ಸಾಕಷ್ಟು ಪ್ರಯತ್ನಿಸಿ ಆರೋಗ್ಯ ಇಲಾಖೆ ಯಶಸ್ವಿ ಯಡೆ ಕಾಲು ಇಡುತ್ತಿದೆ ಕ್ಷಯ ರೋಗದ ವಿರುದ್ಧ ಹೋರಾಡಲು ಸಹಕಾರ ನೀಡಿದ ಸರ್ಕಾರಿ, ಖಾಸಗಿ ವೈದ್ಯರು ಹಾಗೂ ಜಿಲ್ಲಾಡಳಿತಕ್ಕೆ ಸರ್ಕಾರದ ಪರವಾಗಿ ಅಭಿನಂದನೆ ತಿಳಿಸಿದರು.
ಹೃದಯ ವೈಶಾಲ್ಯ ಯೋಜನೆಯಡಿ 49 ಇ.ಸಿ.ಜಿ ಯಂತ್ರಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನೀಡುವ ಮೂಲಕ ಜಿಲ್ಲಾಧಿಕಾರಿ ಕುಮಾರ ಹೃದಯ ವೈಶಾಲ್ಯತೆ ಮೆರೆದಿದ್ದಾರೆ, ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳ ಪೋಷಕರು ತಂಗಲು ಸರಿಯಾದ ವ್ಯವಸ್ಥೆ ಇರಲಿಲ್ಲ, ಇದರ ಕುರಿತು ಎಲ್ಲಾ ಶಾಸಕರೊಡನೆ ಚರ್ಚಿಸಿ ಸಿ.ಎಸ್.ಆರ್ ಫಂಡ್ ಮೂಲಕ 40 ಲಕ್ಷ ರೂ ವೆಚ್ಚದಲ್ಲಿ 100 ಜನ ತಂಗಲು ಮತ್ತು ಸ್ನಾನ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ ಶೀಘ್ರವೇ ಅದರ ಉದ್ಘಾಟನೆ ನೆರವೇರಲಿದೆ ಎಂದು ತಿಳಿಸಿದರು.
ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಆಶಾಲತಾ ಮಾತನಾಡಿ, ಕ್ಷಯರೋಗದ ಕುರಿತು ಜಿಲ್ಲೆಯಲ್ಲಿ ಸುಮಾರು 2 ಲಕ್ಷದ 41 ಸಾವಿರಕ್ಕೂ ಹೆಚ್ಚಿನ ಜನರಿಗೆ ತಪಾಸಣೆ ನಡೆಸಲಾಗಿದೆ, ಅದರಲ್ಲಿ 20,434 ಸಂಶಯಸ್ಪದ ರೋಗಿಗಳು ಕಂಡು ಬಂದಿದ್ದಾರೆ, ಅವರಲ್ಲಿ 8,843 ಉಚಿತ ಎಕ್ಸರೆ ಪರೀಕ್ಷೆ, ಇನ್ನುಳಿದವರಿಗೆ ಕಫಾ ಸೇರಿದಂತೆ ಅಗತ್ಯ ಪರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.
2017 ಕ್ಕೆ ಹೋಲಿಸಿದರೆ ಇಂದು ಕ್ಷಯ ರೋಗ ಪ್ರಕರಣಗಳು ಶೇಕಡಾ 20% ರಷ್ಟು ಕಡಿತಗೊಂಡಿದೆ, ಇದಕ್ಕಾಗಿ ಭಾರತ ಸರ್ಕಾರವೂ 2022 ನೇ ಸಾಲಿನಲ್ಲಿ ಜಿಲ್ಲೆಗೆ ಕಂಚಿನ ಪದಕವನ್ನು ನೀಡಿ ಗೊರವಿಸಲಾಗಿದೆ. 2023 ನೇ ಸಾಲಿನಲ್ಲಿ ಕರ್ನಾಟಕದ 10 ಜಿಲ್ಲೆಯಲ್ಲಿ ಪರಿಶೋಧನೆ ನಡೆಸಿದಾಗ ಶೇಕಡಾ 40% ರಷ್ಟು ಕ್ಷಯರೋಗ ನಿರ್ಮೂಲನೆ ಆಗಿದ್ದು ಭಾರತ ಸರ್ಕಾರವು ಕರ್ನಾಟಕಕ್ಕೆ ರಜತ ಪದಕ ನೀಡಿ ಗೌರವಿಸಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ. ಶಾಸಕ ಪಿ ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮೈಸೂರ್ ಶುಗರ್ ಕಂಪನಿಯ ನಿಯಮಿತ ಅಧ್ಯಕ್ಷ ಸಿ.ಡಿ ಗಂಗಾಧರ, ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಮೀರಶಿವಲಿಂಗಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ. ಮೋಹನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…