ಮಂಡ್ಯ

ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಹಲವು ವಿಶೇಷ, ವಿಭಿನ್ನ, ಹೊಸತನ

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮೂರು ವೇದಿಕೆಗಳಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ 31ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ‌ ಜೊತೆಜೊತೆಗೆ ಸಮ್ಮೇಳನದ‌ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರಿಗೆ ತಿಳಿಸುವ ಕೆಲಸಕ್ಕೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ‌ ಸಾಕ್ಷಿಯಾಗಲಿದೆ.

ಡಿ. 20, 21, 22ರಂದು ಮಂಡ್ಯದಲ್ಲಿ ಮೂರು ದಿನಗಳ ಕಾಲ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ವಿಶೇಷತೆ, ವಿಭಿನ್ನತೆ, ಹೊಸತನಗಳಿಗೆ ವೇದಿಕೆಯಾಗಲಿದೆ. ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆಗಳಲ್ಲಿ ಸಾಂಸ್ಕೃತಿಕ, ಪ್ರಮುಖವಾಗಿ ಅಂಧರ ಗೋಷ್ಠಿಯು ಒಂದು.

ಕನ್ನಡ ಪ್ರೇಮಿಗಳಿಗೆ ಹಾಗೂ ಸಾಹಿತ್ಯಾಸಕ್ತರಿಗೆ ನುಡಿಹಬ್ಬದ ಸವಿಯ ಜೊತೆಗೆ ಕರುನಾಡು ಮತ್ತು ಹೊರನಾಡಿನ ಕಲೆ, ಕಲಾಪ್ರಕಾರಗಳನ್ನು ಪ್ರದರ್ಶಿಸಲು ಸಾಂಸ್ಕೃತಿಕ ಸಮಿತಿ ವೇದಿಕೆ ಸಿದ್ಧಪಡಿಸಿದೆ. ನಾನಾ ಬಗೆಯ ಕಲೆ, ಕಲಾಪ್ರಕಾರಗಳನ್ನು ನಾಡಿನ ಜನತೆಗೆ ಪ್ರದರ್ಶಿಸಲು ರಾಜ್ಯ ಹೊರರಾಜ್ಯಗಳಿಂದ ಕೂಡ ಕಲಾವಿದರು, ಕಲಾ ತಂಡಗಳು ಮಂಡ್ಯಕ್ಕೆ ಆಗಮಿಸಲಿವೆ.

ಸಾಹಿತ್ಯ ಸಮ್ಮೇಳನವೆಂದರೆ ಅಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಅನಾವರಣ. ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಕಲೆ ಪ್ರದರ್ಶಿಸಲು ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆನ್ ಲೈನ್, ಆಫ್ ಲೈನ್ ಮೂಲಕ ಸಾಕಷ್ಟು ಪ್ರಚಾರ ಮಾಡಿ ಅರ್ಜಿ ಸ್ವೀಕರಿಸಿದ್ದು ಸಾಂಸ್ಕೃತಿಕ ಸಮಿತಿಯ ಆಯ್ಕೆ ಸಮಿತಿಯಿಂದ ಕಲಾವಿದರು, ಕಲಾತಂಡಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಲು ಕ್ರಮಕೈಗೊಳ್ಳಲಾಗಿದೆ.

ರಾಜ್ಯಾದ್ಯಂತ ಬಂದಂತಹ ಅರ್ಜಿಗಳು 620 ಅದರಲ್ಲಿ ಆಯ್ಕೆಯಾದ ತಂಡಗಳು 201. ಮುಖ್ಯ ವೇದಿಕೆ ಹಾಗೂ ಸಮಾನಂತರ ವೇದಿಕೆ ಸೇರಿದಂತೆ 3 ವೇದಿಕೆಗಳಲ್ಲಿ  ಕಾರ್ಯಕ್ರಮಗಳು ಬೆಳಿಗ್ಗೆ ಎಂಟರಿಂದ ಹತ್ತು ಗಂಟೆವರೆಗೆ ಸಂಜೆ 7ರಿಂದ 10.30 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ.

ಗೌರವಧನದಲ್ಲಿ ತಾರತಮ್ಯ ಆಗುವುದಕ್ಕೆ ಆಸ್ಪದ ನೀಡದೇ ಎಲ್ಲಾ ಕಲಾವಿದರನ್ನು ಸಮಾನ ರೀತಿಯಲ್ಲಿ ಗೌರವಿಸಲಾಗುತ್ತಿದೆ. ಸ್ಥಳೀಯ ಕಲಾ ತಂಡಗಳ ಗೌರವಧನವನ್ನು ಪರಿಷ್ಕರಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಗೌರವಧನವನ್ನು ಕಲಾವಿದರಿಗೆ ನೀಡಲಾಗುತ್ತಿದೆ. ಕನಿಷ್ಠ 20000 ಗರಿಷ್ಠ 40000 ರೂ. ಗೌರವಧನವನ್ನು ನೀಡಲಾಗುವುದು. ಕಲಾಪ್ರಕಾರಗಳು ನೀಡುವ ಕಲಾ ಪ್ರದರ್ಶನದ ಮತ್ತು ಅವರು ಬರುವ ಸ್ಥಳದ ದೂರದ ಮೇಲೆ ಗೌರವಧನ ನೀಡಲಾಗುವುದು.

ಕಲಾಪ್ರಕಾರದಲ್ಲಿ ಜಿಲ್ಲೆಯ ಮಹಿಳೆಯರು, ವಿಕಲಚೇತನರು, ಮಕ್ಕಳು, ಹಿರಿಯರು ಎಲ್ಲರನ್ನೂ ಸಹ ಗಣನೆಗೆ ತೆಗೆದುಕೊಳ್ಳಲಾಗಿದೆ. ಕಲಾವಿದರಿಗೆ ನೀಡಲಾಗುವ ಗೌರವಧನದಲ್ಲಿ ಜಿ.ಎಸ್‌ಟಿ ಹಾಗೂ ಸರ್ವಿಸ್ ಟ್ಯಾಕ್ಸ್  ಸೇರಿರುವುದಿಲ್ಲ.  ಜಿಎಸ್‌ಟಿ ಹಾಗೂ  ಸರ್ವಿಸ್ ಟ್ಯಾಕ್ಸ್ ಅನ್ನು ಕನ್ನಡ ಸಂಸ್ಕೃತಿ ಇಲಾಖೆಯೇ ಬರಿಸಲಿದೆ. ಮೈಸೂರು ವಿಭಾಗಕ್ಕೆ ಶೇಕಡ 50ರಷ್ಟು ಹಾಗೂ ಇತರ ಜಿಲ್ಲೆಗೆ ಶೇಕಡ 50ರಷ್ಟು ಕಾರ್ಯಕ್ರಮ ನೀಡಲಾಗುವುದು.

ಬೇರೆ  ರಾಜ್ಯದ 5 ಕಲಾ ಪ್ರಕಾರಗಳು, ಹೊರ ಜಿಲ್ಲೆಯಿಂದ 33 ಹಾಗೂ ಮಂಡ್ಯ ಜಿಲ್ಲೆಯಿಂದ 109 ಕಲಾ ತಂಡಗಳು ಭಾಗಿಯಾಗಲಿವೆ. ಮೂಡಲಪಾಯ, ಯಕ್ಷಗಾನ, ಬುಡಕಟ್ಟು ಸಮುದಾಯದ ನೃತ್ಯಗಳು, ನಾಡಿನ ಹೆಸರಾಂತ ಜನಪದ ಕಲಾ ಪ್ರದರ್ಶನಗಳು, ಸುಗಮ ಸಂಗೀತ ಇನ್ನಿತರ ಕಲಾ ಪ್ರದರ್ಶನಗಳು ನಡೆಯಲಿದೆ.

ಮಂಡ್ಯ ಜಿಲ್ಲೆ ಹಾಗೂ ಗಡಿ ಜಿಲ್ಲೆಗಳಿಗೆ ಶೇ.50 ಇತರೆ ಜಿಲ್ಲೆಯ ಕಲಾವಿದರಿಗೆ ಶೇ. 50ರಷ್ಟು ಪ್ರಾಧಾನ್ಯತೆ ನೀಡಲಾಗಿದೆ. ಮುಖ್ಯ ವೇದಿಕೆ ಮತ್ತು ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಮಟ್ಟದ ಕಲಾವಿದರು ಕಾರ್ಯಕ್ರಮ‌ ನಡೆಸಿಕೊಡಲಿದ್ದಾರೆ. ಇದರಲ್ಲಿ ಮಂಡ್ಯ ಮೂಲದವರು ಕೂಡ ಇರಬಹುದು. ಬಹುಮುಖ್ಯವಾಗಿ ಮಂಡ್ಯ ಜಿಲ್ಲೆಯ ಕಲಾವಿದರಿಗೆಂದೇ ಕಲಾಮಂದಿರ ಮತ್ತು ಅಂಬೇಡ್ಕರ್ ಭವನದಲ್ಲಿ ಮೂರು ದಿನ ನಿರಂತರವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಅನುಭವ, ಜನಪ್ರಿಯತೆ, ಅರ್ಹತೆ, ವಿಶೇಷತೆ, ಶೈಕ್ಷಣಿಕ ಪದವಿಗಳು, ಪಡೆದಿರುವ ಪ್ರಶಸ್ತಿಗಳು ಇತ್ಯಾದಿಗಳನ್ನು ಪರಿಗಣಿಸಿ ಕಲಾವಿದರ ಆಯ್ಕೆಗೆ ಕ್ರಮವಹಿಸಲಾಗಿದೆ. ಅವರ ವಾಸ್ತವ್ಯಕ್ಕೆ ಮಂಡ್ಯ ವಿಶ್ವವಿದ್ಯಾಲಯ ಹಾಗೂ ಬಿಜಿಎಸ್ ಸಮುದಾಯ ಭವನ ಕಾಯ್ದಿರಿಸಲಾಗಿದೆ. ಕಲಾವಿದರು ತಂಗುವ ಸ್ಥಳದಿಂದ ಕಾರ್ಯಕ್ರಮದ ಸ್ಥಳಕ್ಕೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಮೊದಲ ಬಾರಿಗೆ ಮೇಳೈಸಲಿದೆ ಪೊಲೀಸ್ ಬ್ಯಾಂಡ್

ಮಂಡ್ಯ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ   ಡಿಸೆಂಬರ್ 22 ರಂದು ಸಂಜೆ 6 ಗಂಟೆಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದೆ. ಮೈಸೂರು ದಸರಾದಲ್ಲಿ ಪೊಲೀಸ್ ಬ್ಯಾಂಡ್ ನೋಡಲು ಜನರು ಖಾತರದಿಂದ ಕಾಯುತ್ತಾರೆ ಈ ಅವಕಾಶವನ್ನು ಜಿಲ್ಲಾ ಉಸ್ತುವಾರಿ ಸಚಿವರ ಕೋರಿಕೆಯ ಮೇರೆಗೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಇಂತಹ ಸದವಕಾಶವನ್ನು ಮಂಡ್ಯ ಜಿಲ್ಲೆಯ ಜನತೆಗೆ ಜಿಲ್ಲೆಯಲ್ಲೇ ಕಲ್ಪಿಸಿಕೊಟ್ಟಿರುವುದು ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷತೆ‌ ಎನ್ನಬಹುದು. –ದಿನೇಶ್ ಗೂಳಿಗೌಡ, ಶಾಸಕರು ಹಾಗೂ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮನ್ವಯ ಸಮಿತಿ ಅಧ್ಯಕ್ಷರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

3 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

3 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

3 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

3 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

3 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago