Mysore
18
clear sky

Social Media

ಶನಿವಾರ, 03 ಜನವರಿ 2026
Light
Dark

ಮಂಡ್ಯ| ನಾಡಬಾಂಬ್‌ ಸ್ಫೋಟ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್‌ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ.

ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್‌ ಪಾಟೀಲ್‌, ಪಾರ್ಥ ಗಾಯಗೊಂಡಿದ್ದಾರೆ.

ವಿದ್ಯಾರ್ಥಿಗಳು ಬೆಟ್ಟದ ಮೇಲಿನ ದೇವಾಲಯದ ಸ್ವಚ್ಚತಾ ಕಾರ್ಯಕ್ಕೆ ತೆರಳಿದ್ದರು. ಸ್ವಚ್ಚತೆ ಮಾಡುವಾಗ ಕಸದ ರಾಶಿಗೆ ಕೈ ಹಾಕಿದ್ದಾರೆ. ಈ ವೇಳೆ ಏಕಾಏಕಿ ನಾಡ ಬಾಂಬ್‌ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಛಿದ್ರಗೊಂಡಿದ್ದು, ಇನ್ನೊರ್ವನ ಮುಖದ ಭಾಗಕ್ಕೆ ಗಾಯವಾಗಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕಾಡು ಹಂದಿ ಬೇಟೆಗೆ ನಾಡ ಬಾಂಬ್‌ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.

Tags:
error: Content is protected !!