ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ.
ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್ ಪಾಟೀಲ್, ಪಾರ್ಥ ಗಾಯಗೊಂಡಿದ್ದಾರೆ.
ವಿದ್ಯಾರ್ಥಿಗಳು ಬೆಟ್ಟದ ಮೇಲಿನ ದೇವಾಲಯದ ಸ್ವಚ್ಚತಾ ಕಾರ್ಯಕ್ಕೆ ತೆರಳಿದ್ದರು. ಸ್ವಚ್ಚತೆ ಮಾಡುವಾಗ ಕಸದ ರಾಶಿಗೆ ಕೈ ಹಾಕಿದ್ದಾರೆ. ಈ ವೇಳೆ ಏಕಾಏಕಿ ನಾಡ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಛಿದ್ರಗೊಂಡಿದ್ದು, ಇನ್ನೊರ್ವನ ಮುಖದ ಭಾಗಕ್ಕೆ ಗಾಯವಾಗಿದೆ.
ಗಾಯಾಳು ವಿದ್ಯಾರ್ಥಿಗಳನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಕಾಡು ಹಂದಿ ಬೇಟೆಗೆ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…