ಮಂಡ್ಯ: ತಾಲೂಕಿನ ಕನ್ನಲಿ ಗ್ರಾಮದಲ್ಲಿ ಇಂದು ಮುಂಜಾನೆ ಚಿರತೆಯೊಂದು ಸೆರೆ ಸಿಕ್ಕಿದೆ. ಗ್ರಾಮದ ಸುತ್ತಮುತ್ತ ಹಲವು ದಿನದಿಂದ ಆತಂಕ ಹುಟ್ಟಿಸಿದ್ದ ಈ ಚಿರತೆಯನ್ನು ಕೊನೆಗು ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದಾರೆ.
ಕಳೆದ ವಾರವಷ್ಟೆ ಮೂರು ಚಿರತೆ ಮರಿ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿತ್ತು. ಈ ಪೈಕಿ ಒಂದನ್ನು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಲಾಗಿತ್ತು. ಉಳಿದಂತೆ ಎರಡು ಮರಿಯನ್ನು ಚಿರತೆ ಎತ್ತುಕೊಂಡು ಹೋಗಿದ್ದು, ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು.
ಚಿರತೆ ಸೆರೆಗೆಂದು ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದು, ಇಂದು ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಸೆರೆಯಿಂದಾಗಿ ಸದ್ಯ ಕನ್ನಲಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.