ಮಂಡ್ಯ

ಮಂಡ್ಯ: ಕೆಂಪೇಗೌಡ ಉದ್ಯನವನ ಅಭಿವೃದ್ಧಿಗೆ ಕ್ರಮ: ಶಾಸಕ ರವಿಕುಮಾರ

ಮಂಡ್ಯ: ಜಿಲ್ಲೆಯ ಉದ್ಯನವನಗಳ ಅಭಿವೃದ್ಧಿಗಾಗಿ ಸರ್ಕಾರದಿಂದ 2 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು, ನಗರದ ಕೆಂಪೇಗೌಡರ ಉದ್ಯನವನವನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ಶಾಸಕ ಪಿ.ರವಿಕುಮಾರ್‌ ಹೇಳಿದರು.

ಭಾನುವಾರ(ಜೂ.30) ನಗರದ ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಂಪೇಗೌಡರ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರಿಗೆ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಚಿಂತಿಸುತ್ತಿದ್ದು, ಮಂಡ್ಯ ಅಥವಾ ಮದ್ದೂರು ಭಾಗದಲ್ಲಿ ಉತ್ತಮ ಸ್ಥಳವನ್ನು ಗುರುತಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಜೊತೆಗೆ ಈ ಬಗ್ಗೆ ಕೇಂದ್ರ ಸಚಿವರೊಂದಿಗೂ ಚರ್ಚಿಸಲಾಗುವುದು ಎಂದರು.

ನಾಡಪ್ರಭು ಕೆಂಪೇಗೌಡರ ದೂರ ದೃಷ್ಟಿ ಮಹತ್ವದಾದದ್ದು, ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ಸ್ಥಳ ಬೇಕಿತ್ತು, ಆವಾಗ ಕೆಂಪೇಗೌಡರು ಬೆಂಗಳೂರಿನಲ್ಲಿ ವ್ಯಾಪರಕ್ಕೆ ಸ್ಥಳ ನಿಗದಿಪಡಿಸಿ ಉತ್ತಮ ಪೇಟೆಗಳನ್ನು ನಿರ್ಮಾಣ ಮಾಡಿದರು. ಸಮುದ್ರಕ್ಕಿಂತ 3500 ಅಡಿ ಎತ್ತರದಲ್ಲಿದ್ದ ಬೆಂಗಳೂರನ್ನು ರಾಜಧಾನಿಯಾಗಿ ಆಯ್ಕೆ ಮಾಡಿ ಹಲವಾರು ಸೌಲಭ್ಯಗಳನ್ನು ಒದಗಿಸಿ ಲಕ್ಷಾಂತರ ಜನರು ಜೀವನ ನಡೆಸುವ ರೀತಿ ಬೆಂಗಳೂರನ್ನು ನಿರ್ಮಾಣ ಮಾಡಿದ ಹೆಗ್ಗಳಿಕೆ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 min ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

18 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago