Mysore
20
overcast clouds
Light
Dark

ಮಂಡ್ಯ: ಮತ ಎಣಿಕೆಗೆ ಸಕಲ ಸಿದ್ಧತೆ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ನಾಳೆ(ಜೂನ್.4) ನಡೆಯಲಿದ್ದು, ಜಿಲ್ಲಾಡಳಿದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಬಗ್ಗೆ ಮಂಡ್ಯ ಲೋಕಸಭಾ ಕ್ಷೇತ್ರದ ಮತ ಎಣಿಕೆ ವೀಕ್ಷಕರಾದ ನೀರಾಜ್ ಕುಮಾರ್  ಅವರು  ಇಂದು(ಜೂನ್‌ .3) ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಹಿತಿ ಪಡೆದುಕೊಂಡರು.

ಈ ವೇಳೆ ಜಿಲ್ಲಾಧಿಕಾರಿ ಡಾ: ಕುಮಾರ. ಮತ ಎಣಿಕೆ ಕುರಿತು ಅಗತ್ಯ ಸಿದ್ಧತೆಗಳನ್ನು ವಿವರಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.