ಮಂಡ್ಯ

ಮಂಡ್ಯ | ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ಸಕಲ ಸಿದ್ಧತೆ: ಸಚಿವ ಎನ್ ಚಲುವರಾಯಸ್ವಾಮಿ

ಮಂಡ್ಯ: ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು‌ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು ನಾಗಮಂಗಲದ ದೇವಲಾಪುರದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೈತರು ಕೃಷಿ ಪದ್ಧತಿಗಳ ಬಗ್ಗೆ ಮಾಹಿತಿ ಪಡೆಯಲು‌ ಮಂಡ್ಯ ಜಿಲ್ಲೆಯಿಂದ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯಕ್ಮೆ ತೆರಳಬೇಕಿತು. ರೈತರು ಹೆಚ್ಚಿರುವ ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯದ ಅವಶ್ಯಕತೆಯನ್ನು ಮನಗಂಡು ಪ್ರಾರಂಭಿಸಲಾಗುತ್ತಿದೆ. ರೈತರು ಸದುಪಯೋಗ ಪಡಿಸಿಕೊಳ್ಳಿ ಎಂದರು.

ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ರೀತಿಯ ತಳಿಗಳು ಬೆಳೆಗೆ ಬಳಸಬೇಕಿರುವ ರಸಗೊಬ್ಬರ ಸೇರಿದಂತೆ ಪ್ರತಿಯೊಂದು ಮಾಹಿತಿ ಸಂಶೋಧಕರಿಂದ ದೊರಕಲಿದೆ ಎಂದರು.

ಸಂಕ್ರಾಂತಿ ಹಬ್ಬ ಆದಾಯವನ್ನು ಸಂಭ್ರಮಿಸುವ ಹಬ್ಬ ಸಂಕ್ರಾಂತಿ ಹಬ್ಬ ರೈತರು ತಾವು ಬೆಳೆದ ಭತ್ತ, ರಾಗಿ, ಕಾಳುಗಳನ್ನು ಒಟ್ಟುಗೂಡಿಸಿ, ಪೂಜೆ ಮಾಡಿ ಮನೆಗೆ ಬೇಕಾದಷ್ಟನ್ನು ಶೇಖರಿಸಿ ಉಳಿದದನ್ನು ಮಾರಾಟ ಮಾಡುತ್ತಾರೆ. ರೈತರಿಗೆ ಉತ್ತಮ ಆದಾಯ ಬರಲಿ ಎಂದು ಅವರು ಹಲವಾರು ತಿಂಗಳಿಂದ ಶ್ರಮಪಟ್ಟಿ ಪಡೆದ ಫಲವನ್ನು ಪೂಜಿಸುವ ಹಬ್ಬ ಸಂಕ್ರಾಂತಿ ಹಬ್ಬ ಎಂದು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಮಾತನಾಡಿ,  ಸಚಿವರಾದ ಚಲುವರಾಯಸ್ವಾಮಿ ಅವರು ಕೃಷಿಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದು, 17 ತಿಂಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕನಿಷ್ಠ 3 ಬಾರಿ ಭೇಟಿ ನೀಡಿ ಕೃಷಿಯ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಶ್ರಮ ವಹಿಸಿದ್ದಾರೆ. 84 ಲಕ್ಷ ಹೆಕ್ಟೇರ್ ಬಿತ್ತನೆ ಕಾರ್ಯಕ್ಕಾಗಿ 6 ಲಕ್ಷ ಟನ್ ಬಿತ್ತನೆ ಬೀಜವನ್ನು ರೈತರಿಗೆ ಯಾವುದೇ ತೊಂದರೆಯಿಲ್ಲದೇ ಒದಗಿಸಿದ್ದಾರೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ 1,47,000 ರೈತರಿಗೆ1400 ಕೋಟಿ ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲವನ್ನು ನೀಡಲಾಗಿದೆ. ಕಳೆದ ವರ್ಷ ಮೈ ಶುಗರ್ ಪುನಶ್ಚೇತನಕ್ಕೆ 50 ಕೋಟಿ ರೂ ಹಣವನ್ನು ನೀಡಲಾಗಿತ್ತು. ಈ ಬಾರಿ ಕಾರ್ಖಾನೆ ಉತ್ತಮವಾಗಿ ನಡೆಯುತ್ತಿದೆ. ಇದಕ್ಕೆ ಕಾರಣಕರ್ತರಾದ ಹಾಗೂ ಜಿಲ್ಲೆಯ ಬಗ್ಗೆ ಹೆಚ್ಚಿನ ಪ್ರೀತಿ ಹೊಂದಿರುವ ಕೃಷಿ ಸಚಿವರಿಗೆ ಧನ್ಯವಾದ ಅರ್ಪಿಸಿದರು.

ಮದ್ದೂರು, ಮಳವಳ್ಳಿ ಹಾಗೂ ಕೊಪ್ಪದ ಕೊನೆಯ ಭಾಗದ ಕೃಷಿ ಚಟುವಟಿಕೆಗೆ ನೀರು ತಲುಪಿಸಲು ವಿ.ಸಿ.ನಾಲೆ ಆಧುನೀಕರಣ ಕಾಮಗಾರಿಯನ್ನು 1400 ಕೋಟಿ ರೂ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಶಕ್ತಿ ಯೋಜನೆಯಡಿ ಮಹಿಳೆಯರಿಗೆ 10,48,000 ಕೆ.ಎಸ್.ಆರ್. ಟಿಸಿ ಬಸ್ ಗಳಲ್ಲಿ ಉಚಿತ ಟಿಕೆಟೆ ನೀಡಿ 278 ಕೋಟಿ ರೂ ಬರಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ 485000 ಕುಟುಂಬಗಳಿಗೆ ಉಚಿತ ವಿದ್ಯುತ್ ಒದಗಿಸಿ 280 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ ಕುಮಾರ ಮಾತನಾಡಿ, ಮಕರ ಸಂಕ್ರಾಂತಿ ಮಣ್ಣಿನ, ರೈತರ, ಸುಗ್ಗಿ ಹಾಗೂ ಸಂಭ್ರಮದ ಹಬ್ಬ. ಸಂಕ್ರಾಂತಿ ಹಬ್ಬ ರೈತರು ಬೆಳೆದ ಬೆಳೆಗಳನ್ನು ಪೂಜಿಸಿ ಸಂಭ್ರಮಿಸುತ್ತಾರೆ. ಮಕರ ಸಂಕ್ರಾಂತಿ ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕ. ಸಂಕ್ರಾಂತಿ ಹಬ್ಬವನ್ಬು ಈ ಬಾರಿ ಮಂಡ್ಯ ಜಿಲ್ಲೆಯಲ್ಲಿ ವಿನೂತನವಾಗಿ ಆಚರಿಸುತ್ತಿರುವುದು ಸಂತೋಷದಾಯಕ‌ ವಿಷಯ ಎಂದರು.

ಮಕರ ಸಂಕ್ರಾಂತಿಯು ಗ್ರಾಮೀಣ ಸೊಗಡನ್ನು ಯುವ ಪೀಳಿಗೆಗೆ ಪರಿಚಯಿಸುವ ಹಬ್ಬ. ಇದರಲ್ಲಿ ಯುವ ಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರಿಗೆ ಗೌರವ ಸಲ್ಲಿಸಬೇಕು. ಇಂದಿನ ಯುವ ಪೀಳಿಗೆ ಹಾಗೂ ಮಕ್ಕಳು ಹೊಸತನದ ವೇಗದಲ್ಲಿ ಕೃಷಿ, ವಿವಿಧ ಬೆಳೆ, ಗಿಡಗಳ ಪರಿಚಯವೇ ಇಲ್ಲದಂತೆಯಾಗಿದ್ದರೆ. ಅವರು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡುವ ಪ್ರವೃತ್ತಿ ಬೆಳಸಿಕೊಳ್ಳಬೇಕು ಎಂದರು.

ಸಂಕ್ರಾಂತಿ ಹಬ್ಬವನ್ನು ಮನೆಯಲ್ಲೇ ಕುಳಿತು ನಾಲ್ಕು ಗೋಡೆಯ ಮಧ್ಯ ಆಚರಿಸದೇ ಎಲ್ಲರೂ ಒಟ್ಟಿಗೆಗೂಡಿ ಸಂಭ್ರಮದಿಂದ ಆಚರಿಸುವ ಹಬ್ಬವಿದು. ರೈತರಿಗೆ ಶಕ್ತಿ ನೀಡಿ ಕೃಷಿಯಲ್ಲಿ ಸದಾ ಜೊತೆಯಲ್ಲಿರುವ ಗೋ ವನ್ನು ಪೂಜಿಸುವ ಹಬ್ಬ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ದೇವಲಾಪುರದ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಮಕ್ಕಳಿಗೆ ಸೌಲಭ್ಯಗಳ ವಿದ್ಯೆ ಸುಗ್ಗಿಯನ್ನು ಒದಗಿಸಲು
ಮಾಜಿ ವಿಧಾನಪರಿಷತ್ ಶಾಸಕ ಅಪ್ಪಾಜಿಗೌಡ ಅವರು ಮನವಿ ಮಾಡಿದರು. ಸಚಿವರು ಕಾರ್ಯಕ್ರಮದಲ್ಲಿ ಒಪ್ಪಿಗೆ ನೀಡಿದರು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಗಣ್ಯರಾದ ಸ್ಟರ್ ಚಂದ್ರು, ಹುಚ್ಚೇಗೌಡ, ಗ್ರಾಮ ಪಂಚಾಯಿತಿ ಆಧ್ಯಕ್ಷೆ ಸಿದ್ದಲಿಂಗಮ್ಮ, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ‌ಬಾಲದಂಡಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago