ಮಂಡ್ಯ

ಮಂಡ್ಯ: ಸೆ.15 ರಂದು ಮಾನವ ಸರಪಳಿ ರಚಿಸಿ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲು ಸಕಲ ಸಿದ್ಧತೆ: ಡಾ: ಕುಮಾರ

ಮಂಡ್ಯ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್‌ 15 ರಂದು ನಿಡಘಟ್ಟದಿಂದ ಸಿದ್ದಲಿಂಗಪುರದವರೆಗೆ ಜಿಲ್ಲೆಯ ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದ 3 ತಾಲ್ಲೂಕುಗಳ ಒಟ್ಟು 62 ಕಿ.ಮೀಟರ್ ಮಾನವ ಸರಪಳಿ ರಚಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು,  ಮಾನವ ಸರಪಳಿ ರಚಿಸಲು 17 ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಪ್ರತಿ ಒಂದು ಕಿ.ಮೀಟರ್ ಗೆ ಒಟ್ಟು 62 ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವಲಯ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು.

ಪ್ರತಿ ಒಂದು ಕಿ.ಮೀಟರ್ ಗೆ 1000 ಜನರು/ ವಿದ್ಯಾರ್ಥಿಗಳು ಬೇಕಿದ್ದು, ಇವರನ್ನು ಸಂಘಟಿಸಿ ವ್ಯಕ್ತಿವಾರು ಸೆ.15 ರಂದು ಭಾಗವಹಿಸುವವರ ಪಟ್ಟಿ ಸಿದ್ಧಪಡಿಸಬೇಕು. ಯಾವುದೇ ಲೋಪ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ನಿಡಘಟ್ಟದಲ್ಲಿ‌ ಸರಪಳಿ ಪ್ರಾರಂಭವಾಗುವ ಸ್ಥಳದಲ್ಲಿ ನಾಲ್ಕು ಕಲಾತಂಡಗಳು ಹಾಗೂ ಶಾಲಾ ಬ್ಯಾಂಡ್ ತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಬೇಕು. ಶಿಕ್ಷಣ ಇಲಾಖೆಯವರು ಬ್ಯಾಂಡ್ ತಂಡಗಳಿಗೆ ತರಬೇತಿ ‌ನೀಡಿ ಕಾರ್ಯಕ್ರಮ ಸಜ್ಜುಗೊಳಿಸಬೇಕು ಎಂದರು.

ಸರಪಳಿ ರಚನೆಯಲ್ಲಿ ಭಾಗವಹಿಸುವ ಮಕ್ಕಳನ್ನು ಅವರಿಗೆ ನಿಗದಿಪಡಿಸುವ ಸ್ಥಳಕ್ಕೆ ದೂರವಿದ್ದಲ್ಲಿ ವಾಹನದ ವ್ಯವಸ್ಥೆ ಮಾಡಬೇಕು. ಸರ್ವಿಸ್ ರಸ್ತೆಯಲ್ಲಿ ಸರಪಳಿ ರಚಿಸುವುದರಿಂದ ಮಕ್ಕಳು ಹೆದ್ದಾರಿಯಲ್ಲಿ ಓಡಾಡುವುದು, ರಸ್ತೆ ದಾಡುವುದು ಮಾಡದಂತೆ ನೋಡಿಕೊಳ್ಳಬೇಕು. ಇದಕ್ಕೆ ಪೊಲೀಸ್ ಇಲಾಖೆಯಿಂದ ಅಲ್ಲಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ವಲಯ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ತಮಗೆ ನಿಗದಿಪಡಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಹಾಗೂ ಸ್ಥಳದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು/ ಸಾರ್ವಜನಿಕರ ಹೆಸರಿನ ಪಟ್ಟಿಯನ್ನು ಸೆಪ್ಟೆಂಬರ್ 11 ರೊಳಗಾಗಿ ಸಿದ್ಧಪಡಿಸಿಕೊಂಡು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಂಜೀವಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷರಾ ಮಣಿ, ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವರಾಮೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

9 hours ago