ಮಂಡ್ಯ

ಮಂಡ್ಯ: ಡಿ.9 ರಂದು ವಕ್ಫ್‌ ವಿರೋಧಿ ಸಾರ್ವಜನಿಕ ಸಭೆ

ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾರ್ವಜನಿಕ ಸಭೆಯನ್ನು ಡಿಸೆಂಬರ್ 9 ರಂದು ನಗರದ ಜಿಲ್ಲಾಧಿಕಾರಿ ಕಛೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ನಡೆಸಲಾಗುವ ಸಾರ್ವಜನಿಕ ಸಭೆಗೂ ಮುನ್ನ ಅಂದು ಬೆಳಿಗ್ಗೆ 11:30ಕ್ಕೆ ನಗರದ ಸಿಲ್ವರ್ ಜ್ಯೂಬಿಲಿ ಉದ್ಯಾನದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಮೆರವಣಿಗೆ ನಡೆಸಲಾಗುವುದು ಎಂದರು.

ವಕ್ಫ್‌ನಿಂದ ರೈತರ ಕೃಷಿ ಭೂಮಿ, ಸ್ಮಶಾನ, ಸರ್ಕಾರಿ ಆಸ್ತಿ, ಮಠ ಮಂದಿರಗಳು ಹಾಗೂ ಸಾರ್ವಜನಿಕ ಆಸ್ತಿಯನ್ನು ದೇಶಾದ್ಯಂತ ಕಬಳಿಸಲಾಗುತ್ತಿದ್ದು, ವಕ್ಫ್‌ನ ಕಾಯ್ದೆಗೆ ತಿದ್ದುಪಡಿ ತಂದು ರೈತ, ಸಾರ್ವಜನಿಕ, ಮಠ-ಮಂದಿರ ಹಾಗೂ ಸರ್ಕಾರಿ ಆಸ್ತಿಗಳನ್ನು ರಕ್ಷಿಸಲು ಕೇಮದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಸದರಿ ಸಮಸ್ಯೆ ಉಂಟಾಗಲು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ತಿದ್ದುಪಡಿ ತಂದು ವಕ್ಫ್ ಮಂಡಳಿಗೆ ಮಿತಿಮೀರಿದ ಅಧಿಕಾರ ನೀಡಿರುವುದರಿಂದಾಗಿ ೮೦೦೦ ಎಕರೆಯಷ್ಟಿದ್ದ ವಕ್ಫ್ ಭೂಮಿ ಇಂದು ೯.೪೦ ಲಕ್ಷ ಎಕರೆಗೂ ಹೆಚ್ಚು ವಿಸ್ತಾರವಾಗಿದೆ. ಅಕ್ರಮವಾಗಿ ಆಸ್ತಿ ಹೆಚ್ಚಿಸಿಕೊಳ್ಳುತ್ತಿರುವ ವಕ್ಫ್‌ಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಒಕ್ಕೂಟದ ಸದಸ್ಯ ಮತ್ತು ಬಜರಂಗ ಸೇನೆಯ ಮಂಜುನಾಥ್ ಮಾತನಾಡಿ, ವಕ್ಫ್ ಕಾಯ್ದೆ ಬಡವ, ಮಾನವೀಯ, ದೇಶ ಹಾಗೂ ಸಂವಿಧಾನ ವಿರೋಧಿಯಾಗಿದೆ. ೧೯೧೩ರಲ್ಲಿ ಬ್ರಿಟಿಷರಿಂದ ರಚನೆಯಾದ ಮುಸಲ್ಮಾನ ಮಂಡಳಿಯು ೧೯೨೩ರಲ್ಲಿ ವಕ್ಫ್ ಮಂಡಳಿಯಾಗಿ ರೂಪಾಂತರಗೊಂಡಿದ್ದು, ಇದರ ವಿರುದ್ಧ ಲಂಡನ್‌ನ ಸುಪ್ರೀಂ ನ್ಯಾಯಾಲಯದಲ್ಲಿ ಕೆಲವು ಬ್ರಿಟಿಷರೇ ದಾವೆ ಹೂಡಿದ್ದರಿಂದ ಲಂಡನ್‌ನ ಸುಪ್ರೀಂ ನ್ಯಾಯಾಲಯ ವಕ್ಫ್ ಸರ್ವಕಾಲಿಕ ಗಂಡಾಂತರ, ಇದನ್ನು ಮುಟುಕುಗೊಳಿಸಬೇಕು ಎಂದು ತೀರ್ಪಿನಲ್ಲಿ ಉಲ್ಲೇಖಿಸಿದೆ ಎಂದರು.

ಆಸ್ತಿ ಅಥವಾ ಯಾವುದೇ ರೀತಿಯ ನ್ಯಾಯಕ್ಕಾಗಿ ನ್ಯಾಯಾಲಯಗಳ ಕಡೆಗೆ ಮುಖ ಮಾಡುವುದುಂಟು ಆದರೆ ವಕ್ಫ್ ಸಂಬಂಧ ಜಮೀನಿನ ವ್ಯಾಜ್ಯಕ್ಕೆ ಸಂವಿಧಾನ ಬದ್ಧವಾಗಿ ನ್ಯಾಯಾಲಯಗಳ ಮುಂದೆ ಹಾಜರಾಗುವ ಹಕ್ಕನ್ನು ಕಸಿಯುವ ಕೆಲಸವನ್ನು ೨೦೧೩ರಲ್ಲಿ ಅಂದಿನ ಕೇಂದ್ರ ಸರ್ಕಾರ ಕಸಿದಿದೆ ಎಂದು ಆರೋಪಿಸಿದರು.

ವಕ್ಫ್‌ನಿಂದ ಅಕ್ರಮವಾಗಿ ಭೂಮಿ ವಶ ಪಡಿಸಿಕೊಳ್ಳುವ ಕಾರ್ಯ ನಿಲ್ಲಬೇಕು. ಈ ನಿಟ್ಟಿನಲ್ಲಿ ಹಾಲಿ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ತರಲಿಚ್ಛಿಸುವ ತಿದ್ದುಪಡಿಗೆ ಸರ್ಕಾರ ಸಮ್ಮತಿ ಸೂಚಿಸಬೇಕು. ಅಥವಾ ಆಂದ್ರಪ್ರದೇಶ ರಾಜ್ಯದ ಮಾದರಿ ವಕ್ಫ್‌ನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಕದಂಬ ಸೇನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಜಯಕರ್ನಾಟಕ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಉಮ್ಮಡಹಳ್ಳಿ ಉಮೇಶ್, ಪ್ರಕಾಶ್, ಮೋಹನ್ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

11 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

11 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago