Mysore
21
overcast clouds

Social Media

ಶುಕ್ರವಾರ, 13 ಜೂನ್ 2025
Light
Dark

ಮಂಡ್ಯ| ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಮಂಡ್ಯ: ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ/ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಅರ್ಜಿ ಆಹ್ವಾನಿಸಿದೆ.

ರೋಸ್ಟರ್ ಕಂ-ಮೆರಿಟ್ ಆಧಾರದ ಮೇಲೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವವರನ್ನು ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆ ಆದವರಿಗೆ ಮಾಸಿಕ ಸಂಭಾವನೆ ರೂ.60,000/- ನೀಡಲಾಗುವುದು.

ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಜುಲೈ 29 ರೊಳಗೆ ಸಲ್ಲಿಸುವುದು. ಜುಲೈ 30 ರಂದು ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!