ಮಂಡ್ಯ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(ಮುಡಾ)ದ ಅಕ್ರಮದ ವಿರುದ್ಧ ಹೋರಾಟ ನಡೆಸಲು ಮೈಸೂರಿನತ್ತ ಹೊರಟಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದರು.
ನಗರದ ಬಿಜೆಪಿ ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಜಯಚಾಮರಾಜೇಂದ್ರ ಒಡೆಯರ್ ವೃತ್ತಕ್ಕೆ ಬಂದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪಕ್ಷದ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಅಶೋಕ್ ಜಯರಾಮ್, ಸಾದೊಳಲು ಸ್ವಾಮಿ, ವಿವೇಕ್, ಸಿ.ಟಿ ಮಂಜುನಾಥ್ ಸೇರಿದಂತೆ ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ವಾಹನದಲ್ಲಿ ಪೆರೇಡ್ ಮೈದಾನಕ್ಕೆ ಕರೆದುಕೊಂಡು ಹೋಗಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಹೋರಾ ನಡೆಸಲು ಮುಂದಾಗಿದ್ದ, ಬಿಜೆಪಿ ಕಾರ್ಯಕರ್ತರನ್ನು ಪೊಲೀಸ್ ಬಲಪ್ರಯೋಗ ಉಪಯೋಗಿಸಿ ಬಂಧಿಸುವ ಮೂಲಕ ಮೂಲಕ ಹೋರಾಟವನ್ನು ಹತ್ತಿಕ್ಕಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಆಗಾಗಿ ಇಡೀ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.