ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಎಂಬುದನ್ನೂ ನೋಡದೆ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೇಗೌಡ ಆರೋಪಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗ ನೀಲೇಗೌಡ ಹಾಗೂ ಆತನ ಪತ್ನಿ ಕೀರ್ತಿ ಎಂಬುವವರು ತಮಗೆ ಆಸ್ತಿ ಪಾಲಾಗಿ ಬಂದ ನಂತರವೂ ಜೀವನ ನಿರ್ವಹಣೆಗೆ ಉಳಿಸಿಕೊಂಡ ಆಸ್ತಿಯೂ ತಮಗೇ ಬೇಕೆಂದು ಕಿರುಕುಳ ನೀಡುತ್ತಿದ್ದರು. ನವೆಂಬರ್ ತಿಂಗಳ ೧೭ರಂದು ಮಾರಣಾಂತಿಕ ಹಲ್ಲೆ ಮಾಡಿದ್ದರು ಎಂದರು.
ಹಲ್ಲೆಯಿಂದ ನನಗೆ ಕೈಮುರಿದಿದ್ದು, ತೀವ್ರ ತರನಾದ ಗಾಯಗಳಾಗಿವೆ, ಪತ್ನಿ ಭಾಗ್ಯಮ್ಮಗೆ ಕಾಲು ಮುರಿದಿದ್ದು, ಎದ್ದು ಓಡಾಡದ ಸ್ಥಿತಿಯಲ್ಲಿದ್ದಾರೆ. ಈ ಸಂಬಂದ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ದೂರನ್ನು ಬದಲಿಸಿ ಕೊಡುವಂತೆ ಒತ್ತಡ ಹೇರಿ ಅನ್ಯಾಯ ಎಸಗಲಾಗುತ್ತಿದೆ ಎಂದು ಹೇಳಿದರು.
ಹಲ್ಲೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದರೆ, ಪೊಲೀಸರು ದೂರಿನಲ್ಲಿ ಮಾರಣಾಂತಿಕ ಹಲ್ಲೆ ಎಂಬುದನ್ನ ಬದಲಿಸಿ, ನೀಲೇಗೌಡನ ಮಾವ ಮತ್ತಿತರರ ಹೆಸರನ್ನು ತೆಗೆದು ದೂರು ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ ಎಂದು ದೂರಿದರು.
ಪ್ರಕರಣ ಸಂಬಂಧ ನ್ಯಾಯ ಒದಗಿಸಬೇಕೆಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಲ್ಲಿ ಮನವಿ ಮಾಡಿದ್ದು, ನ್ಯಾಯ ಒದಗಿಸಲಾಗದಿದ್ದರೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಪುತ್ರಿ ವರಲಕ್ಷ್ಮಿ, ವಕೀಲೆ ಸಲ್ಮ ಇತರರು ಇದ್ದರು.
ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…