ಮಂಡ್ಯ: ನಾಪತ್ತೆಯಾಗಿರುವ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಅಧಿಕಾರಿಯ ಬೈಕ್ ಕೆರೆ ಏರಿ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಜಯರಾಮ್ ಕಳೆದ ಮೂರು ದಿನಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು.
ಇದನ್ನು ಓದಿ: ಪೊಲೀಸರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿದರೆ ಕ್ರಿಮಿನಲ್ ಅಪರಾಧವಾಗುವುದಿಲ್ಲ : ಹೈಕೋರ್ಟ್
ನಿನ್ನೆ ಅವರ ಬೈಕ್ ಕೆ.ಆರ್.ಪೇಟೆಯ ದೇವೀರಮ್ಮಟ್ಟಿ ಕೆರೆ ಏರಿ ಮೇಲೆ ಪತ್ತೆಯಾಗಿತ್ತು.
ಬೈಕ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿ ಜಯರಾಮ್ ಆತ್ಮಹತ್ಯೆಗೆ ಶರಣಾಗಿದ್ದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ, ಶವವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





