ಮಂಡ್ಯ

ಮಂಡ್ಯ| ನಾಪತ್ತೆಯಾಗಿದ್ದ ಅಧಿಕಾರಿಯ ಶವ ಪತ್ತೆ

ಮಂಡ್ಯ: ನಾಪತ್ತೆಯಾಗಿರುವ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಅಧಿಕಾರಿಯ ಬೈಕ್‌ ಕೆರೆ ಏರಿ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಜಯರಾಮ್‌ ಕಳೆದ ಮೂರು ದಿನಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು.

ಇದನ್ನು ಓದಿ: ಪೊಲೀಸರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿದರೆ ಕ್ರಿಮಿನಲ್ ಅಪರಾಧವಾಗುವುದಿಲ್ಲ : ಹೈಕೋರ್ಟ್​

ನಿನ್ನೆ ಅವರ ಬೈಕ್‌ ಕೆ.ಆರ್.‌ಪೇಟೆಯ ದೇವೀರಮ್ಮಟ್ಟಿ ಕೆರೆ ಏರಿ ಮೇಲೆ ಪತ್ತೆಯಾಗಿತ್ತು.

ಬೈಕ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿ ಜಯರಾಮ್‌ ಆತ್ಮಹತ್ಯೆಗೆ ಶರಣಾಗಿದ್ದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ, ಶವವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

19 mins ago

ರಾಸಲೀಲೆ ವಿಡಿಯೋ ವೈರಲ್‌: ಡಿಜಿಪಿ ರಾಮಚಂದ್ರರಾವ್‌ ಅಮಾನತುಗೊಳಿಸಿ ಆದೇಶ

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌…

38 mins ago

ನಂಜನಗೂಡು| ಮನೆ ಮುಂದೆ ಕಟ್ಟಿದ್ದ ನಾಯಿ ಹೊತ್ತೊಯ್ದ ಚಿರತೆ: ಜನರಲ್ಲಿ ಆತಂಕ

ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…

48 mins ago

ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಿಸಿ ಕ್ಯಾಮರಾ ಅಳವಡಿಸಿ: ಸ್ನೇಹಮಯಿ ಕೃಷ್ಣ ಮನವಿ

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…

51 mins ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

4 hours ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

4 hours ago