ಮಂಡ್ಯ: ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಗುರುವಾರ ಸಂಜೆ ನಡೆದಿದೆ.
ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್‌ಗೌಡ (11) ಮೃತ ವಿದ್ಯಾರ್ಥಿ.
ಲೇಖನ್‌ಗೌಡ ರಜೆಯ ನಿಮಿತ್ತ ತಮ್ಮ ಸ್ವಗ್ರಾಮ ಬಿಳಿದೇಗಲು ಗ್ರಾಮಕ್ಕೆ ಬಂದಿದ್ದು, ಕಾರ್ಯನಿಮಿತ್ತ ತನ್ನ ತಾತ ಕುಳ್ಳೇಗೌಡನ ಜೊತೆ ಮಂಡ್ಯ ನಗರಕ್ಕೆ ಟಿವಿಎಸ್ ಮೊಪೆಡ್‌ನಲ್ಲಿ ಬಂದಿದ್ದರು. ಕೆಲಸ ಮುಗಿಸಿಕೊಂಡು ವಾಪಸ್ ತೆರಳುತ್ತಿದ್ದಾಗ ಅಕ್ಕಿ ತುಂಬಿದ ಲಾರಿ ನಗರಸಭೆ ಎದುರು ಹಿಂಬದಿಯಿಂದ ಟಿವಿಎಸ್ ಮೊಪೆಡ್‌ಗೆ ಡಿಕ್ಕಿ ಹೊಡೆದಿದೆ.ಈ ಸಂದರ್ಭ ತಾತ ಕುಳ್ಳೇಗೌಡ ಅವರು ಎಡಬದಿಗೆ ಬಿದ್ದರೆ, ಲೇಖನ್‌ಗೌಡ ಬೆಂಗಳೂರು-ಮೈಸೂರು ಹೆದ್ದಾರಿಗೆ ಬಿದ್ದಾಗ ಲಾರಿಯ ಹಿಂಬದಿಯ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟನು.
ಘಟನೆಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿ ಲಾರಿಯನ್ನು ವಶಕ್ಕೆ ಪಡೆದು, ಚಾಲಕನನ್ನು ಬಂಧಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ಕುಳ್ಳೇಗೌಡ ಅವರನ್ನು ಮಿಮ್ಸ್‌ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸಂಚಾರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನವದೆಹಲಿ: ಕೆನರಾ ಬ್ಯಾಂಕ್ ಇಂದು ತನ್ನ ರೆಪೊ-ಲಿಂಕ್ಡ್ ಸಾಲ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡುವ ಮೂಲಕ ಸಾಲಗಾರರಿಗೆ…
ಬೆಂಗಳೂರು: ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಇಡಿ…
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್…
ಹನೂರು: ಕಾವೇರಿ ವನ್ಯಜೀವಿ ಧಾಮ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ ಮಾನವ- ವನ್ಯಜೀವಿ…
ಶಿವಮೊಗ್ಗ: ಪ್ರವಾಸಿಗರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಮೇ.1ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ…
ಮಂಡ್ಯ: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ…