ಮಿಮ್ಸ್ ಎದುರು ಪ್ರತಿಭಟನೆ
ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ರಾಜು ಹಾಗೂ ಜ್ಯೋತಿ ದಂಪತಿಯ ಪುತ್ರ ದೀಪಕ್ (15) ಮೃತ ಬಾಲಕ. ಸೋಮವಾರ ಸಂಜೆ ಸ್ನೇಹಿತನೊಂದಿಗೆ ಆಟವಾಡಲು ತೆರಳಿದ್ದ ದೀಪಕ್, ತಡರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಇದರಿಂದ ಕಂಗಾಲಾದ ಕುಟುಂಬಸ್ಥರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಜೊತೆಯಲ್ಲಿ ತೆರಳಿದ್ದ ಅಪ್ರಾಪ್ತ ಸ್ನೇಹಿತನನ್ನು ವಿಚಾರಿಸಿದಾಗ ಆತ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ್ದಾನೆ. ಆದರೆ, ಇಬ್ಬರೂ ಕೆರೆಯ ಬಳಿ ತೆರಳಿದ್ದನ್ನು ತಾನು ನೋಡಿರುವುದಾಗಿ ಮೃತನ ಅಜ್ಜಿ ತಿಳಿಸಿದ್ದಾರೆ.
ಬಳಿಕ ಗ್ರಾಮದ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ದೀಪಕ್‌ನ ಮೃತದೇಹ ಪತ್ತೆಯಾಗಿದೆ. ಮೃತನ ಮೈಮೇಲೆ ಗಾಯದ ಗುರುತುಗಳು ಕಂಡುಬಂದಿದ್ದು, ಜೊತೆಯಲ್ಲಿದ್ದ ಸ್ನೇಹಿತನೇ ಕೊಲೆ ಮಾಡಿದ್ದಾನೆ ಎಂದು ಪೋಷಕರು ಹಾಗೂ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಮಿಮ್ಸ್ ಎದುರು ಪ್ರತಿಭಟನೆ:
ಬಾಲಕನ ಸಾವಿಗೆ ಕಾರಣನಾದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆ ಶವಾಗಾರದ ಮುಂದೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ಮೃತನ ಸಂಬಂಧಿಕರು ಬೃಹತ್ ಪ್ರತಿಭಟನೆ ನಡೆಸಿ, ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…