ಮಂಡ್ಯ

ಮಂಡ್ಯ: ಕ್ಯಾನ್ಸರ್‌ ಆಸ್ಪತ್ರೆ ಶೀಘ್ರ ನಿರ್ಮಾಣ: ಸಚಿವ ಡಾ.ಶರಣ ಪ್ರಕಾಶ್‌

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್‌ ಆಸ್ಪತ್ರೆ ಕಾಮಗಾರಿಗಳು ಮೂರು ತಿಂಗಳೊಳಗೆ ಪೂರ್ಣವಾಗಲಿದೆ ಎಂದು ಸಚಿವ ಡಾ ಶರಣ್ ಪ್ರಕಾಶ್ ಆರ್. ಪಾಟೀಲ್ ತಿಳಿಸಿದರು.

ಬುಧುವಾರ ನಗರದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಅಧಿಕಾರಿಗಳು ಹಾಗೂ ವೈಧ್ಯರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸವೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು. ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರ ರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಹೊರ ಗುತ್ತಿಗೆ ಮೇಲೆ ಲ್ಯಾಬ್ ಸೇವೆ ಒದಗಿಸುತ್ತಿರುವ ಸಂಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೆಚ್ಚಿನ ದರ ವಿದಿಸುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿದ್ದು, ಇದನ್ನು ಪರಿಶೀಲಿಸಿ ತಪ್ಪು ಕಂಡು ಬಂದಲ್ಲಿ ಟೆಂಡರ್ ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಪಿ.ರವಿಕುಮಾರ್ ಮಾತನಾಡಿ, ಬಿ.ಹೊಸೂರಿನಲ್ಲಿ ನರ್ಸಿಂಗ್, ಪ್ಯಾರ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟಲ್ ಗೆ ಸ್ಥಳದ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕೆ ಯೋಜನೆ ರೂಪಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

ವರ್ಚುಯಲ್ ಡಿಸೆಕ್ಸನ್ ಟೇಬಲ್ ಗೆ ಚಾಲನೆ: ವೈದ್ಯಕೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2.50 ಕೋಟಿ ರೂ ವೆಚ್ಚದಲ್ಲಿ ಖರೀದಿಸಲಾಗಿರುವ ಅನಾಟಮಿ ವರ್ಚುಯಲ್ ಡಿಸೆಕ್ಸನ್ ಟೇಬಲ್ (Anatomy virtual dissection table) ಗೆ ಸಚಿವರು ಚಾಲನೆ ನೀಡಿದರು.

ಸಭೆಯ ನಂತರ ಸಚಿವರು ಮಿಮ್ಸ್ ಆಸ್ಪತ್ರೆಯ ವಾಡ್೯ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾದ ಎ ಬಿ ರಮೇಶ್ ಬಂಡಿಸಿದ್ದೇಗೌಡ,ವಿಧಾನ ಪರಿಷತ್ ಶಾಸಕರಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ ಕುಮಾರ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ: ಸುಜತಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

4 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

4 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

4 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

4 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

4 hours ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

4 hours ago