Mysore
34
few clouds

Social Media

ಬುಧವಾರ, 08 ಏಪ್ರಿಲ 2026
Light
Dark

ಮಂಡ್ಯ | ನಿಲ್ಲಿಸಿದ್ದ ಬಸ್ಸಿಗೆ ಕಾರು ಢಿಕ್ಕಿ: ನಾಲ್ವರು ಮೃತ್ಯು

ಮಂಡ್ಯ : ರಸ್ತೆ ಬದಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ.

ಮೃತರನ್ನು ಬೆಂಗಳೂರು ನಿವಾಸಿಗಳಾದ ಬೆಂಡಿಗನಹಳ್ಳಿ ನಮಿತಾ, ಇನ್ಫೋಸಿಸ್ ನೌಕರ ರಾಜಸ್ಥಾನದ ಪಂಕಜ್ ಶರ್ಮಾ, ವಂಶಿಕೃಷ್ಣ ಹೊಸಕೋಟೆ ಹಾಗೂ ರಘುನಾಥ್ ಭಜಂತ್ರಿ ಧಾರವಾಡ ಎಂದು ಗುರುತಿಸಲಾಗಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಈ ಅಪಘಾತ ಸಂಭವಿಸಿದೆ. ಇಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಹಾಸನ ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್ಸಿನೊಳಗೆ ನುಗ್ಗಿದೆ.

ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!