ಮಂಡ್ಯ : ರಸ್ತೆ ಬದಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ.
ಮೃತರನ್ನು ಬೆಂಗಳೂರು ನಿವಾಸಿಗಳಾದ ಬೆಂಡಿಗನಹಳ್ಳಿ ನಮಿತಾ, ಇನ್ಫೋಸಿಸ್ ನೌಕರ ರಾಜಸ್ಥಾನದ ಪಂಕಜ್ ಶರ್ಮಾ, ವಂಶಿಕೃಷ್ಣ ಹೊಸಕೋಟೆ ಹಾಗೂ ರಘುನಾಥ್ ಭಜಂತ್ರಿ ಧಾರವಾಡ ಎಂದು ಗುರುತಿಸಲಾಗಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ಈ ಅಪಘಾತ ಸಂಭವಿಸಿದೆ. ಇಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಹಾಸನ ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್ಸಿನೊಳಗೆ ನುಗ್ಗಿದೆ.
ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…